Advertisement

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ತಹಶೀಲ್ದಾರ್ ಜನ್ಮ ದಿನ ಆಚರಣೆ

12:57 PM Jun 13, 2021 | Team Udayavani |

ಕೊಪ್ಪಳ: ಕೋವಿಡ್ ನಿಯಮ ಉಲ್ಲಂಘಿಸಿ ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ ಅವರು ತಮ್ಮ ಜನ್ಮ ದಿನ ಆಚರಣೆ ಮಾಡಿ ವಿವಾದಕ್ಕೀಡಾಗಿದ್ದಾರೆ.

Advertisement

ಕನಕಗಿರಿ ತಹಶೀಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರವಿ ಅಂಗಡಿ ಶನಿವಾರ ಸರ್ಕಾರಿ ಕಚೇರಿಯಲ್ಲಿ ತಮ್ಮ ಇತರೆ ಸಿಬ್ಬಂದಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ.

ಜನ್ಮ ದಿನ ಆಚರಣೆಯಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲ ಯಾರೊಬ್ಬರೂ ಮಾಸ್ಕ್ ಧರಿಸಿಲ್ಲ. ಜಿಲ್ಲಾಡಳಿತವು ಕೋವಿಡ್ ಬಗ್ಗೆ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ ಸಭೆ, ಸಮಾರಂಭಕ್ಕೆ ನೂರೆಂಟು ನಿಯಮ ಹೇರಿದ್ದರೂ  ತಹಶೀಲ್ದಾರ್ ರವಿ ಅಂಗಡಿ ಅವರು ಕೋವಿಡ್ ನಿಯಮ ಉಲ್ಲಂಘಿಸಿ ಜನ್ಮ ದಿನ ಅಚರಣೆ ಮಾಡಿಕೊಂಡಿದ್ದು ಜಿಲ್ಲೆಯಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ವರ್ತನೆಗೆ ಅಸಮಾಧಾನವೂ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next