Advertisement
ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಶುಕ್ರವಾರ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ನಾವು ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿದ್ದೇವೆ. ಹೀಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಎಲ್ಲರ ನಿಗಾ ಇರುತ್ತದೆ. ಮಹತ್ವದ ಈ ಜವಾಬ್ದಾರಿಯನ್ನು ಗ್ರಾಮ ಲೆಕ್ಕಿಗರು ಮತ್ತು ಕಂದಾಯ ನಿರೀಕ್ಷಕರ ಮೇಲೆ ಹಾಕಿ ಕೂರುವಂತಿಲ್ಲ. ಸಮಸ್ಯೆ ಎದುರಾದಲ್ಲಿ, ಹೊಣೆ ತಹಶೀಲ್ದಾರರೇ ಹೊರಬೇಕಾಗುತ್ತದೆ ಎಂಬ ಅರಿವು ಇರಲಿ ಎಂದು ಎಚ್ಚರಿಸಿದರು.
Related Articles
Advertisement
ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ಯುವ ಮತದಾರರು, ವಿಕಲಚೇತನರು, ತೃತೀಯ ಲಿಂಗಿಗಳು, ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವವರನ್ನು ಮತದಾರರ ಪಟ್ಟಿಗೆ ಸೇರಿಸಲು ನಾವು ವಿಶೇಷ ಕ್ರಮ ಕೈಗೊಂಡಿದ್ದೇವೆ. ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ನಾವು ಎಲ್ಲ ಕಾಲೇಜುಗಳ ಪ್ರಾಚಾರ್ಯರೊಂದಿಗೆ ಸಭೆ ನಡೆಸಿ, ಅವರಿಗೆ ವಿದ್ಯಾರ್ಥಿಗಳಿಂದ ನಮೂನೆ 06 ಹಾಗೂ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ, ಸಲ್ಲಿಸುವಂತೆ ಸೂಚನೆ ನೀಡಿದ್ದು, ಅದರಂತೆ ಸುಮಾರು 15 ಸಾವಿರ ವಿದ್ಯಾರ್ಥಿಗಳಿಂದ ದಾಖಲೆ ಪಡೆದು, ಸೇರ್ಪಡೆಗೆ ಕ್ರಮ ವಹಿಸಲಾಗಿದೆ. ಎಪಿಕ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಕಾರ್ಯ ಸುಮಾರು ಶೇ.81 ರಷ್ಟು ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ನಡೆಸಲು ತಾಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು. ಜಿಪಂ ಸಿಇಒ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಚಂದ್ರಯ್ಯ, ಜಿಪಂ ಉಪಕಾರ್ಯದರ್ಶಿ ಡಾ|ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯಿತ್ರಿ ಮತ್ತಿತರರಿದ್ದರು.