Advertisement

ಸೀಲ್‌ಡೌನ್‌ ಪ್ರದೇಶಕ್ಕೆ ತಹಶೀಲ್ದಾರ್‌ ಭೇಟಿ

05:03 PM Jul 08, 2020 | Suhan S |

ಬಂಕಾಪುರ: ಸಮಿಪದ ನಾರಾಯಣಪುರ ಗ್ರಾಮದ ಮಹಿಳೆಗೆ ಕೋವಿಡ್ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಪ್ರಕಾಶ ಕುದರಿ ಸೀಲ್‌ಡೌನ್‌ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ನಂತರ ಮಾತನಾಡಿದ ಅವರು, ಕೋವಿಡ್ ಸೋಂಕಿತಳ ನಿವಾಸದ ಸುತ್ತಮುತ್ತಲಿನ  100 ಮೀಟರ್‌ ಪ್ರದೇಶವನ್ನು ಕಂಟೇನ್ಮೆಂಟ್‌ ಜೋನ್‌ ಆಗಿ ಪರಿವರ್ತಿ ಸಲಾಗುವುದು. 300 ಮೀಟರ್‌ ಪ್ರದೇಶವನ್ನು ಬಫರ್‌ ಜೋನ್‌ ಆಗಿ ಪರಿವರ್ತಿಸಲಾಗುವುದು. ಕಂಟೇನ್ಮೆಂಟ್‌ ಜೋನ್‌ ಜನರಿಗೆ ಅವಶ್ಯಕ ವಸ್ತುಗಳ ಪೂರೈಕೆಗೆ, ಜನರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರು ಕೋವಿಡ್ ವೈರಸ್‌ ತಡೆಗಟ್ಟಲು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.

ತಾಪಂ ಇಒ ಪ್ರಶಾಂತ ತುರಕಾಣಿ, ಪಿಎಸ್‌ಐ ಸಂತೋಷಗೌಡ ಪಾಟೀಲ, ಕಂದಾಯ ಅಧಿಕಾರಿ ಆರ್‌.ಎಂ. ನಾಯಕ, ಜಿಪ ಮಾಜಿ ಸದಸ್ಯ ಶಶಿಧರ ಹೊನ್ನಣ್ಣವರ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next