Advertisement

ಕಠಿಣ ಪರಿಶ್ರಮದಿಂದಅಭ್ಯಸಿಸಿ ಗುರಿ ತಲುಪಿ: ನಿಷ್ಟಿ

10:23 AM Aug 09, 2018 | Team Udayavani |

ಕಲಬುರಗಿ: ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ನಿರೀಕ್ಷಿಸಿದ ಫಲಿತಾಂಶ ಹಾಗೂ ಬಯಸಿದ ಹುದ್ದೆ ಪಡೆಯುವಂತೆ ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಡಾ| ನಿರಂಜನ ನಿಷ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

Advertisement

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ದೊಡ್ಡಪ್ಪ ಅಪ್ಪ ವಸತಿ ವಿಜ್ಞಾನ ಪದವಿ-ಪೂರ್ವ ಮಹಾವಿದ್ಯಾಲಯದಲ್ಲಿ ಪ್ರಸಕ್ತ ವರ್ಷದ ವಿಜ್ಞಾನ ಚಟುವಟಿಕೆಗಳನ್ನು ಉದ್ಘಾಟನೆ ನೆರವೇರಿಸಿ, ಶ್ರಮವಹಿಸಿ ಅಧ್ಯಯನದಲ್ಲಿ ತೊಡಗಿದರೆ
ಜ್ಞಾನದ ಜತೆಗೆ ಗುರಿ ಸಾಧಿಸಬಹುದು. ಆದ್ದರಿಂದ ವಿದ್ಯಾರ್ಥಿಗಳಿಗೆ ಓದುವಿನ ಕಡೆ ಮಾತ್ರ ಹೆಚ್ಚಿನ ಲಕ್ಷ್ಮೀ ಇರಬೇಕೆಂದು ಸಲಹೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜದೇಶಮುಖ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮಾದರಿ ಗುರಿ ಇಟ್ಟುಕೊಳ್ಳುವುದು ಬಹಳ ಅಗತ್ಯವಿದೆ. ಅದೇ ರೀತಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ 2018ನೇ ಸಾಲಿನ ಪದವಿ ಪೂರ್ವ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಐ.ಐ.ಟಿ, ಜೆಇಇ ಹಾಗೂ ನೀಟ್‌ ಪರೀಕ್ಷೆಗಳಲ್ಲಿ ಸ್ಥಾನ ಗಿಟ್ಟಿಸಿದವರಿಗೆ ನಗದು
ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು. ಶರಣ ಬಸವೇಶ್ವರ ವಿಜ್ಞಾನ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ರಾಮಕೃಷ್ಣರೆಡ್ಡಿ ಹಾಜರಿದ್ದರು. ಕಾಲೇಜಿನ ಪ್ರಾಚಾರ್ಯ ವಿನೋದಕುಮಾರ ಎಲ್‌ ಪತಂಗೆ ವಂದಿಸಿದರು. ಕಾಲೇಜಿನ ಸಿಬ್ಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next