Advertisement

ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ 

02:14 PM Jul 10, 2021 | Team Udayavani |

ಜಗಳೂರು: ನಿಯಮ ಬಾಹಿರವಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಆದೇಶ ನೀಡಿರುವ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಅಂಗಡಿ ಪರವಾನಗಿ ರದ್ದುಗೊಳಿಸಿ ಹೊಸ ನೇಮಕಾತಿ ಮಾಡಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

Advertisement

ಡಿ.ಎಸ್‌.ಎಸ್‌ ಸಂಚಾಲಕಮಲೆಮಾಚಿಕೆರೆ ಸತೀಶ್‌ ಮಾತನಾಡಿ, ಹೊಸಕೆರೆ ಗ್ರಾಮದಲ್ಲಿ ಇತ್ತೀಚೆಗೆ ನೂತನ ನ್ಯಾಯಬೆಲೆ ಅಂಗಡಿ ತೆರೆಯಲು ಪರವಾನಗಿ ನೀಡಿದ್ದು, ನ್ಯಾಯಬೆಲೆ ಅಂಗಡಿ ನಿರ್ವಹಣೆಗೆ ಸಂಬಂಧಿಸಿದಂತೆ ಸಿಬ್ಬಂದಿ ನೇಮಕಾತಿಯಲ್ಲಿ ಅಂಗವಿಕಲರ ಮೀಸಲಾತಿಯಲ್ಲಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಅರ್ಹತೆ ಇಲ್ಲದವರನ್ನು ನಿಯಮ ಬಾಹಿರವಾಗಿ ನೇಮಕ ಮಾಡಿದ್ದು, ಕೂಡಲೇ ಈ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ನ್ಯಾಯಬೆಲೆ ಅಂಗಡಿ ಪರವಾನಗಿ ಕೋರಿ ಒಟ್ಟು 12 ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಐವರು ಅಂಗವಿಕಲರು ಇದ್ದಾರೆ. ಇವರ ಪೈಕಿ ಅರ್ಹತೆ ಇರುವವರ ಅರ್ಜಿ ಪರಿಗಣಿಸದೆ ಅರ್ಹತೆ ಇಲ್ಲದವರ ಅರ್ಜಿ ಮಾನ್ಯ ಮಾಡಲಾಗಿದೆ. ಸೂಕ್ತ ಗೋದಾಮು ಮತ್ತು ಅಗತ್ಯ ಸಂಗ್ರಹ ಸ್ಥಳ ಪರಿಶೀಲನೆ ಮಾಡದೆ ಅಧಿಕಾರಿಗಳು ಅರ್ಜಿ ಪರಿಗಣಿಸಿರುವುದರ ಹಿಂದೆ ರಾಜಕೀಯ ಒತ್ತಡ ಮತ್ತು ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಮೇಲ್ನೊಟಕ್ಕೆ ಕಂಡು ಬರುತ್ತಿದೆ. ಈ ಬಗ್ಗೆ ತಹಶೀಲ್ದಾರರು ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಂಡು ಸೂಕ್ತಅಭ್ಯರ್ಥಿಗೆ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದರು

ಡಿ.ಎಸ್‌.ಎಸ್‌ ಪದಾಧಿಕಾರಿಗಳಾದ ಹನುಮಂತಪ್ಪ ಕರಿಬಸಪ್ಪ ಹೊಸಕೆರೆ, ರುದ್ರೇಶ್‌, ಪ್ರವೀಣ, ಸತೀಶ್‌, ಬಸವರಾಜ, ಮಂಜುನಾಥ, ಮಹಾಂತೇಶ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next