ನವದೆಹಲಿ:26/11 ಮುಂಬೈ ಭಯೋತ್ಪಾದಕ ದಾಳಿ ಹಾಗೂ ಪಠಾಣ್ ಕೋಟ್ ಉಗ್ರ ದಾಳಿಯ ಹಿಂದಿನ ರೂವಾರಿಗಳ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಳ್ಳಬೇಕೆಂದು ಭಾರತ ಮತ್ತು ಅಮೆರಿಕ ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಮ್ಮ ನೆಲದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಅವಕಾಶ ಇಲ್ಲ ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದೆ.
ಭಾರತ, ಅಮೆರಿಕ ಭಯೋತ್ಪಾದಕ ನಿಗ್ರಹ ಕಾರ್ಯಪಡೆ ಜಂಟಿಯಾಗಿ ನೀಡಿರುವ ಪ್ರಕಟಣೆಯಲ್ಲಿ, ತಮ್ಮ ನೆಲದಲ್ಲಿ ಭಯೋತ್ಪಾದಕರಿಗೆ ಯಾವುದೇ ಅವಕಾಶ ಇಲ್ಲ ಎಂಬುದನ್ಉ ಸಾಬೀತುಪಡಿಸಲು ಪಾಕಿಸ್ತಾನ ತಕ್ಷಣವೇ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಅಲ್ಲದೇ 26/11 ಮುಂಬೈ ಹಾಗೂ ಪಠಾಣ್ ಕೋಟ್ ದಾಳಿಯ ರೂವಾರಿಗಳ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಮಂಗಳೂರಿನಲ್ಲಿ ಮುಂದುವರಿದ ಮಳೆ: ಹಲವು ಪ್ರದೇಶಗಳು ಜಲಾವೃತ, ಕುಸಿದ ರಸ್ತೆ
2008ರಲ್ಲಿ ನಡೆದಿದ್ದ ಮುಂಬೈ ಭಯೋತ್ಪಾದನಾ ದಾಳಿಯಲ್ಲಿ 170ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಪಾಕಿಸ್ತಾನ ಮೂಲದ ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆ ಈ ದಾಳಿಯ ಸಂಚು ರೂಪಿಸಿತ್ತು. ಈ ಘಟನೆ ನಂತರ ಭಯೋತ್ಪಾದನೆ ವಿರುದ್ಧ ಭಾರತ ಮತ್ತು ಅಮೆರಿಕ ಜಂಟಿಯಾಗಿ ಹೋರಾಡಲು ನಿರ್ಧರಿಸಿದ್ದವು.
ಗಡಿ ಸೇರಿದಂತೆ ಎಲ್ಲಾ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಬಲವಾಗಿ ಖಂಡಿಸಲು ಉಭಯ ದೇಶಗಳ ಮಾತುಕತೆ ವೇಳೆ ಪ್ರಸ್ತಾಪಿಸಲಾಗಿತ್ತು. ಅಲ್ಲದೇ ಆಲ್ ಖೈದಾ, ಐಸಿಸ್, ಪಾಕಿಸ್ತಾನ ಮೂಲದ ಲಷ್ಕರ್, ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದವು.
ದೇವಸ್ಥಾನದ ಆವರಣದಲ್ಲಿ ಮೂವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಹುಂಡಿ ದೋಚಿ ಪರಾರಿ