Advertisement
ನೂತನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಹಾಗೂ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
Related Articles
Advertisement
ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಗ್ರಾಮ ಪಂಚಾಯಿತಿಯಿಂದ ಎನ್‌ಒಸಿ ಪಡೆದುಕೊಳ್ಳುವುದು ಕಡ್ಡಾಯವಲ್ಲ. ಈ ಪೈಕಿ ಆಧಾರ ಕಾರ್ಡ ಮತ್ತು ರೇಶನ್ ಕಾರ್ಡ್ ಇದ್ದರೆ ಸಾಕು. ತೋಟದ ಮನೆಗಳಿಗೆ ಈ ಯೋಜನೆ ಅನ್ವಯವಾಗುವುದಿಲ್ಲವೆಂದು ಸ್ಪಷ್ಟಪಡಿಸಿದರು. ಶಾಲಾ ಕಾಲೇಜುಗಳ ವಿದ್ಯುತ್ ಅಪಾಯಕಾರಿ ಸ್ಥಳಗಳನ್ನು ಬದಲಾವಣೆಗೆ ಈ ಮಾಹೆಯ ಅಂತ್ಯದೊಳಗೆ ಕ್ರಮ ವಹಿಸಬೇಕು ಎಂದರು. ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ನೋಂದಣಿ ದಿನಾಂಕದಿಂದ ಒಂದು ತಿಂಗಳಲ್ಲಿ ಸಂಪರ್ಕ ಕಲ್ಪಿಸುವ ಕೆಲವಾಗಬೇಕು ಎಂದರು.
ವಿದ್ಯುತ್ ಕುಂದು ಕೊರತೆ ನಿವಾರಣೆಗೆ ವಿದ್ಯುತ್ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು ತರುವ ದೂರುಗಳ ನಿವಾರಣೆಗೆ ಎಲ್ಲ ರೀತಿಯಿಂದ ಸಿದ್ಧತೆ ಮಾಡಿಕೊಳ್ಳಲು. ಸಮಸ್ಯೆಗೆ ಬೇಗನೇ ಪರಿಹರಿಸುವಂತಾಗಬೇಕು. ಗಂಗಾ ಕಲ್ಯಾಣ ಯೋಜನೆಗೆ ಸಂಬಂಸಿದ ವಿದ್ಯುತ್ ಸಂಪರ್ಕ, ಹೊಸ ಕಲೆಕ್ಷನ್, ಕುಡಿಯುವ ನೀರು, ಟಿಸಿ ಬದಲಾವಣೆ ಸೇರಿದಂತೆ ಯಾವುದೇ ರೀತಿಯ ದೂರು ಬರದಂತೆ ಕ್ರಮ ವಹಿಸಿ ಇಲಾಖೆಯಲ್ಲಿ ಸುಧಾರಣೆ ತರುವ ಕೆಲಸವಾಗಬೇಕು ಎಂದರು.
ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಎಲ್ಲ ಕಾಮಗಾರಿಗಳು ಬರುವ ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಿ ಉದ್ಘಾಟನೆಗೆ ಸಜ್ಜುಗೊಳಿಸಬೇಕು. ಬರುವ ಜೂನ್ ಮಾಹೆಯಿಂದ ಮಳೆಗಾಲ ಆರಂಭಗೊಳ್ಳಲಿದ್ದು, ವಿದ್ಯುತ್ ಸಂಪರ್ಕಕ್ಕೆ ಎದುರಾಗುವ ಸಮಸ್ಯೆಗಳನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲು ತಿಳಿಸಿದರು.
ಟಿಸಿ ರಿಪೇರಿ, ಐಪಿ ಸೆಟ್‌ನಲ್ಲಿ ನಿರ್ವಹಣೆ ಮಾಡಿ. ಈ ನಿಟ್ಟಿನಲ್ಲಿ ಅಧಿಕಾರಿಗಳು ಚೆನ್ನಾಗಿ ಕೆಲಸ ನಿರ್ವಹಿಸಿ, ಸಭೆಯಲ್ಲಿ ನೀಡಲಾದ ನಿರ್ದೇಶನಗಳನ್ನು ತಮ್ಮ ಕೆಳ ಹಂತದ ನೌಕರರಿಗೆ ತಲುಪಿಸಿ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವ ಕಾರ್ಯ ಮಾಡಲು ತಿಳಿಸಿದರು.
ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಡಿ.ಭಾರತಿ, ಕೆಪಿಟಿಸಿಎಲ್‌ನ ನಿರ್ದೇಶಕ ಜಿ.ಆರ್. ಚಂದ್ರಶೇಖರಯ್ಯ, ಮುಖ್ಯ ಎಂಜಿನಿಯರ್ ಎಸ್.ವಿ. ಮಂಜುನಾಥ, ಕಾರ್ಯ ನಿರ್ವಾಹಕ ಎಂಜಿನಿಯರ್ ಕೆ.ಎ. ಆನಂದ, ಅಧೀಕ್ಷಕ ಅಭಿಯಂತರ ಜಿ.ಕೆ. ಗೊಟ್ಯಾಳ, ಹೆಸ್ಕಾಂ ಡಿಟಿ ಎ.ಎನ್. ಕಾಂಬಳೆ, ಡಿಎಫ್‌ಒ ಬಿ. ಮಂಜುನಾಥ, ಫೈನಾನ್ಸ್ ಅಡವೈಸರ್ ಮಂಜಪ್ಪ, ಮುಖ್ಯ ಅಭಿಯಂತರ ಹೆಬ್ಟಾಳ ಮುಂತಾದವರು ಉಪಸ್ಥಿತರಿದ್ದರು.