Advertisement

ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮವಹಿಸಿ

07:37 AM Jul 25, 2020 | Suhan S |

ಮಳವಳ್ಳಿ: ಜನಸಂಖ್ಯಾ ನಿಯಂತ್ರಣದ ಕ್ರಮಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಈ ಮೂಲಕ ಜನಸಂಖ್ಯಾ ಸ್ಫೋಟದಿಂದ ಆಗುವ ಅನಾಹುತಗಳನ್ನು ತಡೆಯ  ಬೇಕು ಎಂದು ತಹಶೀಲ್ದಾರ್‌ ಕೆ.ಚಂದ್ರಮೌಳಿ ತಿಳಿಸಿದರು.

Advertisement

ತಾಲೂಕು ಆರೋಗ್ಯ ಇಲಾಖೆ ಕಚೇರಿಯ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜನಸಂಖ್ಯಾ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಇಂತಹ ಹಲವು ಕಾರ್ಯಕ್ರಮವನ್ನು ಮಾಡಲಾಗು ತ್ತಿದೆ. ಜನಸಂಖ್ಯಾ ಸ್ಫೋಟದಿಂದ ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಸಾಕಷ್ಟು ಪರಿಣಾಮ, ಹಲವು ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳನ್ನು ಎಲ್ಲರೂ ಅನುಸರಿಸಬೇಕು. ಸರ್ಕಾರ ಮತ್ತು ಇಲಾಖೆ ಜತೆ ಸಾರ್ವಜನಿಕರು ಸಹಕಾರ ನೀಡಿದರೆ ಮಾತ್ರ ಜನಸಂಖ್ಯೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಹೇಳಿದರು.

ಏರುತ್ತಿರುವ ಜನಸಂಖ್ಯೆ ನಿಯಂತ್ರಣದಿಂದ ದೇಶದ ಅಭಿವೃದ್ಧಿ ಸಾಧ್ಯ. ವಿಶ್ವದಲ್ಲಿ ಚೀನಾ ನಂತರ ಭಾರತ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿದೆ. ಜನಸಂಖ್ಯೆ ಹೆಚ್ಚಳ ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಅನಕ್ಷರತೆ, ಬಡತನ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ತಾಪಂ ಇಒ ಬಿ.ಎಸ್‌.ಸತೀಶ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ಶಿವಾನಂದ, ತಾಲೂಕು ಆರೋಗ್ಯ ಶಿಕ¡ಣಾಧಿಕಾರಿ ಡಾ.ವೀರಣ್ಣಗೌಡ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next