Advertisement
ಇದು, ರಾಜ್ಯ ಚುನಾವಣಾ ಆಯೋಗ ಉಪ ಚುನಾವಣೆ ಪ್ರಯುಕ್ತ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಅನುಷ್ಠಾನಕ್ಕೆ ನೇಮಕಗೊಂಡಿರುವ ವಿಶೇಷ ಅಧಿಕಾರಿ ಹಾಗೂ ಖಡಕ್ ಐಎಎಸ್ ಅಧಿಕಾರಿ ಎಂದೇ ಖ್ಯಾತಿಯಾಗಿರುವ ಮುನೀಷ್ ಮೌದ್ಗಿಲ್, ಜಿಲ್ಲಾಡಳಿತ ಹಾಗೂ ಉಪ ಚುನಾವಣೆಗೆ ನೇಮಕಗೊಂಡಿರುವ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಶುಕ್ರವಾರ ಮಧ್ಯಾಹ್ನ ದಿಢೀರನೆ ಆಗಮಿಸಿ ಉಪ ಚುನಾವಣೆಯ ಸಿದ್ಧತೆಗಳ ಜೊತೆಗೆ ಮಾದರಿ ನೀತಿ ಸಂಹಿತೆ ಪಾಲನೆ ಹಾಗೂ ಉಲ್ಲಂಘನೆ ಕುರಿತು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.
Related Articles
Advertisement
ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಚುನಾವಣಾ ವೆಚ್ಚ ವೀಕ್ಷಕರಾದ ರಣವಿಜಯ್‌ಕುಮಾರ್, ಚುನಾವಣಾ ವೀಕ್ಷಕರಾದ ವೆಂಕಟಮುರಳಿ, ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಸಹಾಯಕ ಚುನಾವಣಾ ಅಧಿಕಾರಿಗಳಾದ ಕೆ.ನರಸಿಂಹಮೂರ್ತಿ, ಶ್ರೀನಿವಾಸ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಏಜೆಂಟರು ಉಪಸ್ಥಿತರಿದ್ದರು.
ದೂರುಗಳಿಗೆ 990009911 ಕರೆ ಮಾಡಿ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ ಉಲ್ಲಂಘನೆ ವಿಚಾರವಾಗಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಅಥವಾ ಏಜೆಂಟರು ಹಾಗೂ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಇದಕ್ಕಾಗಿ ದೂರವಾಣಿ ಸಂಖ್ಯೆ 990009911 ಗೆ ಸಂಪರ್ಕಿಸಬಹುದು ಎಂದು ಮಾದರಿ ನೀತಿ ಸಂಹಿತೆಯ ವಿಶೇಷ ಅಧಿಕಾರಿಗಳಾಗಿರುವ ಮುನೀಷ್ ಮೌದ್ಗಿಲ್ ತಿಳಿಸಿದರು.