Advertisement

ಕುಡಿವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

07:11 AM Jun 10, 2020 | Lakshmi GovindaRaj |

ತುಮಕೂರು: ಗ್ರಾಮೀಣ ಪ್ರದೇಶಗಳಲ್ಲಿ ಜನ-ಜಾನವಾರುಗಳ ಕುಡಿವ ನೀರು ಪೂರೈಕೆಗೆ ಸಂಬಂಧಿಸಿದಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸದ ಎಂಜಿನಿಯರ್‌ಗಳನ್ನು ಅಮಾನತು ಮಾಡಲು ಕ್ರಮ ಕೈಗೊಳ್ಳಬೇಕೆಂದು ಉಸ್ತುವಾರಿ  ಸಚಿವ ಜೆ.ಸಿ.ಮಾಧುಸ್ವಾಮಿ ಜಿಪಂ ಸಿಇಒ ಶುಭಾ ಕಲ್ಯಾಣ್‌ಗೆ ಖಡಕ್‌ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಮುಂದುವರಿದ ಕೆಡಿಪಿ ಸಭೆಯಲ್ಲಿ ಮಾತನಾಡಿ, ಎಂಜಿನಿಯರ್‌ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಖುದ್ದು  ಭೇಟಿ ನೀಡಿ ಪರಿಶೀಲಿಸಬೇಕು, ಆ ಪ್ರದೇಶದಲ್ಲಿರುವ ಜನಸಂಖ್ಯೆ, ಕೊಳವೆ ಬಾವಿಗಳ ಸಂಖ್ಯೆ, ನೀರಿನ ಮೂಲ, ಸಮಸ್ಯೆಗಳ ಮಾಹಿತಿ ಕೂಡಲೇ ಒದಗಿಸ ಬೇಕು ಎಂದರು.

Advertisement

ಬೇಸರ ವ್ಯಕ್ತಪಡಿಸಿದ ಸಚಿವ: ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯ ನಿರ್ವಾಹಕ ಎಂಜಿನಿಯರ್‌ ಚೆನ್ನವೀರಸ್ವಾಮಿಗೆ ಸೂಚನೆ ನೀಡಿ ಕುಡಿವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳ ಬಗ್ಗೆ ಸಲ್ಲಿಸಿರುವ ಮಾಹಿತಿ  ಸುಳ್ಳಿನಕಂತೆ ಎಂದು ಬೇಸರ ವ್ಯಕ್ತಪಡಿಸಿದರು.

ನಿಖರವಾದ ಮಾಹಿತಿ ನೀಡಿ: ಕೆಡಿಪಿ ಸಭೆಗೆ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಮಾಹಿತಿಯಲ್ಲಿ ಲೋಪವಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನು ಮನೆಗೆ ಕಳುಹಿಸುತ್ತೇನೆಂದು ಎಚ್ಚರಿಕೆ ನೀಡಿದ ಸಚಿವರು, ಜಿಲ್ಲೆಯಲ್ಲಿ ವಿವಿಧ ವಸತಿ  ಯೋಜನೆಗಳಡಿ ಮಂಜೂ ರಾದ ಸುಮಾರು 40 ಸಾವಿರ ಮನೆಗಳು ನಿರ್ಮಾಣವಾಗದೆ ಬಾಕಿ ಉಳಿದಿವೆ. ಈ ಪೈಕಿ 24,977 ಮನೆಗಳು ತಳಪಾಯ, ಗೋಡೆ, ಛಾವಣಿ ಹಂತದಲ್ಲಿದ್ದರೆ ಉಳಿದ 15,955 ಮನೆಗಳ ನಿರ್ಮಾಣ ಕಾರ್ಯ  ಇನ್ನೂ ಕೈಗೆತ್ತಿಕೊಳ್ಳದೇ ಇರಲು ಕಾರಣವೇನೆಂದು ಕೇಳಿದಾಗ ಸಂಬಂಧಿಸಿದ ಅಧಿಕಾರಿ ಉತ್ತರಿಸಲು ತಡವರಿಸಿದರು.

ಡೀಸಿ ಮಾಹಿತಿ: ನಂತರ ಕಂದಾಯ ಇಲಾಖೆ ಪ್ರಗತಿ ಪರಿಶೀಲಿಸಿದ ಸಚಿವರು, ಸರ್ಕಾರ ನೀಡುತ್ತಿರುವ ವಿವಿಧ ಪಿಂಚಣಿ ಸೌಲಭ್ಯಕ್ಕಾಗಿ ಸಲ್ಲಿಸಿರುವವರ ಅರ್ಜಿಗಳು ವಿಲೇವಾರಿ  ಯಾಗದೇ ಬಾಕಿ ಉಳಿದಿರಲು ಕಾರಣವೇನೆಂದು ಮಾಹಿತಿ  ಕೇಳಿದಾಗ ಉತ್ತರಿಸಿದ ಡೀಸಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಲ್ಲೆಯಲ್ಲಿ ವೃದಾಟಛಿಪ್ಯ ವೇತನ, ವಿಧವಾ, ಅಂಗವಿಕಲ, ಮನಸ್ವಿನಿ, ಮತ್ತು ಸಂಧ್ಯಾ ಸುರಕ್ಷಾ ಯೋಜನೆ  ಸೇರಿದಂತೆ ಒಟ್ಟು 35356 ಫ‌ಲಾನುಭವಿಗಳು ಪಿಂಚಣಿ  ಪಡೆಯುತ್ತಿದ್ದು, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಂಚೆ ಕಚೇರಿ ಮೂಲಕ ಪಾವತಿಯಾಗುವ ಪಿಂಚಣಿದಾರರಿಗೆ ಮಾತ್ರ ಸಕಾಲದಲ್ಲಿ ಪಿಂಚಣಿ ಪಾವತಿಯಾಗಿಲ್ಲ. ಉಳಿ ದಂತೆ ನೇರವಾಗಿ ಖಾತೆಗೆ ಜಮೆಯಾಗು ವವರಿಗೆ ಪಿಂಚಣಿ  ಪಾವತಿಯಾಗಿದೆ ಎಂದು ಮಾಹಿತಿ ನೀಡಿದರು.

ಶೇ.100ರಷ್ಟು ಪ್ರಗತಿ: ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಸಂಜೀವರಾಜು ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ಇಲಾಖೆಗೆ ಗುರಿ ನೀಡಲಾಗಿದ್ದ ರಾಜ್ಯ ಹೆದ್ದಾರಿ ರಸ್ತೆ ಹಾಗೂ ಜಿಲ್ಲಾ ಮತ್ತು ಇತರೆ ರಸ್ತೆ  ಕಾಮಗಾರಿಗಳು ಪೂರ್ಣ ಗೊಂಡಿದ್ದು, ಶೇ.100ರಷ್ಟು ಪ್ರಗತಿ ಸಾಧಿಸ ಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಗಾರ್ಮೆಂಟ್ಸ್‌ ನೌಕರರ ಅನುಕೂಲಕ್ಕಾಗಿ ಅವಶ್ಯಕತೆ ಇರುವ ಕಡೆ ಬಸ್‌ ವ್ಯವಸ್ಥೆ ಮಾಡಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗೆ  ನಿರ್ದೇಶನ ನೀಡಿದರು. ಶಾಸಕ ಜಿ.ಬಿ. ಜ್ಯೋತಿಗಣೇಶ್‌, ತುರುವೇಕೆರೆ ಶಾಸಕ ಜಯರಾಂ, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಸ್ಥಾಯಿಸಮಿತಿ ಅಧ್ಯಕ್ಷೆ ಮಂಜುಳಾ, ಅಪರ  ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಇದ್ದರು.

Advertisement

ಕೋವಿಡ್‌-19 ಲಾಕ್‌ಡೌನ್‌ ಅವಧಿಯಲ್ಲಿ ಅಬಕಾರಿ ಇಲಾಖೆ ನಡೆಸಿದಷ್ಟು ಭ್ರಷ್ಟಾಚಾರ ಯಾವ ಇಲಾಖೆಯಲ್ಲಿಯೂ ನಡೆ ದಿಲ್ಲ. ಇಲಾಖೆ ಅಧಿಕಾರಿಗಳು ಲಿಕ್ಕರ್‌ ಅಂಗಡಿಗಳೊಂದಿಗೆ ಶಾಮೀಲಾಗಿ ಹಣ ಲೂಟಿ ಮಾಡಿದ್ದಾರೆ. ಮದ್ಯ  ವನ್ನು ನಾಲ್ಕು ಪಟ್ಟು ಹೆಚ್ಚಿನ ದರಕ್ಕೆ ಮಾರಾಟ ಮಾಡಿ ಅಕ್ರಮ ವೆಸಗಿದ್ದಾರೆ. 
-ಜೆ.ಸಿ.ಮಾಧುಸ್ವಾಮಿ, ಸಚಿವ

Advertisement

Udayavani is now on Telegram. Click here to join our channel and stay updated with the latest news.

Next