Advertisement

ಕುಡಿವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ

04:58 PM May 07, 2020 | Team Udayavani |

ತುಮಕೂರು: ಜಿಲ್ಲೆಯಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆ ದುರಸ್ತಿಯಲ್ಲಿರುವ ಶುದ್ಧ ಕುಡಿವ ನೀರಿನ ಘಟಕಗಳನ್ನು ಕೂಡಲೇ ಸರಿ ಪಡಿಸುವಂತೆ ಜಿಪಂ ಅಧ್ಯಕ್ಷೆ ಲತಾ ಎಂ.ರವಿ ಕುಮಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮೀಣ ಕುಡಿವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಿ, ಖಾಸಗಿ ಬೋರ್‌ ವೆಲ್‌ಗ‌ಳಿಂದ ನೀರು ಪೂರೈಸಲು ಅವಕಾಶ ಕಲ್ಪಿಸಲಾಗಿದ್ದು, ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದರು.

Advertisement

ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ದುರಸ್ತಿಯಲ್ಲಿರುವ ಆರ್‌ಒ ಪ್ಲಾಂಟ್‌ಗಳನ್ನು ಪಟ್ಟಿ ಮಾಡಿ, ದುರಸ್ತಿಯಾಗಿ ರುವ ಘಟಕದಲ್ಲಿ ದುರಸ್ತಿಯಲ್ಲಿದೆ ಎಂದು
ಬೋರ್ಡ್‌ ಹಾಕಬೇಕು. ಅಲ್ಲದೇ ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧ ನೀರಿನ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಟರ್‌ ಮ್ಯಾನ್‌ಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಘಟಕ ನಿರ್ವಹಿಸುವ ಬಗ್ಗೆ, ಸಣ್ಣ ಪುಟ್ಟ ರಿಪೇರಿ ಬಗ್ಗೆ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ವೈರಸ್‌ ನಿಯಂತ್ರಣದ ಬಗ್ಗೆ ಅಧ್ಯಕ್ಷರು ಮಾಹಿತಿ ಕೇಳಿದಾಗ, ಇದಕ್ಕೆ ಉತ್ತರಿಸಿದ ಡಿಎಚ್‌ಒ ಡಾ.ಬಿ.ಆರ್‌. ಚಂದ್ರಿಕಾಜಿಲ್ಲೆಯಲ್ಲಿ ಈವರೆಗೂ 1,769
ಮಂದಿಯನ್ನು ಕ್ವಾರೆಂಟೈನ್‌ ಮಾಡಲಾಗಿದ್ದು, 633 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದರಲ್ಲಿ 560 ಜನರು ಡಿಸ್ಚಾರ್ಜ್‌ ಆಗಿದ್ದಾರೆ. 3,315 ಜನರ ಗಂಟಲುಸ್ರಾವ ಮಾದರಿ ಸಂಗ್ರಹಿಸಿ ತಪಾಸಣೆಗೊಳ ಪಡಿಸಿದ್ದು, ಅದರಲ್ಲಿ 2701 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. 474 ತಪಾಸಣೆಯ ವರದಿ ನಿರೀಕ್ಷಿಸಲಾಗಿದ್ದು, ಈವರೆಗೂ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗುಣಮುಖ ಹಾಗೂ ನಾಲ್ಕು ಮಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಂದ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಐಸಿಆರ್‌ಎಂ ನಿರ್ದೇಶನದ ಮೇರೆಗೆ ತಾಲೂಕುವಾರು ಗರ್ಭಿಣಿಯರನ್ನು ಪರೀಕ್ಷೆಗೊಳಪಡಿಸಬೇಕು. ಅಲ್ಲದೇ ಸ್ಥಳೀಯ, ಹೊರ ರಾಜ್ಯ
ಅಥವಾ ಹಾಟ್‌ಸ್ಪಾಟ್‌ ಪ್ರದೇಶಗಳಿಂದ ಬಂದವರು ಸರ್ಕಾರಿ ಅಥವಾ ಖಾಸಗಿ ವೈದ್ಯರ ಬಳಿ ಬಂದಾಗ ಸ್ಕೋರ್‌ ಶೀಟ್‌ನಲ್ಲಿ ಕೇಳಲಾಗಿರುವ ಪ್ರಶ್ನೆಗಳನ್ನು ಭರ್ತಿ ಮಾಡಬೇಕು. ಅದರಲ್ಲಿ
6ಕ್ಕಿಂತ ಹೆಚ್ಚಿನ ಸ್ಕೋರ್‌ ಬಂದರೆ ಅಂತಹವರ ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸುವಂತೆ ಸರ್ಕಾರಿ ಮತ್ತು ಖಾಸಗಿ ವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಅಧ್ಯಕ್ಷರ ಗಮನಕ್ಕೆ ತಂದರು.

ಜಿಪಂ ಉಪಾಧ್ಯಕ್ಷೆ ಶಾರದಾ ಮಾತನಾಡಿ, ಜಿಲ್ಲೆಯಲ್ಲಿರುವ ಅಂಗನವಾಡಿಗೆ ಬರುತ್ತಿದ್ದು, ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಊಟದ ವ್ಯವಸ್ಥೆ ಮಾಡಿರುವ ಬಗ್ಗೆ ಮಾಹಿತಿ ಕೇಳಿದಾಗ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌.ನಟರಾಜ್‌ ಅವರು, ಲಾಕ್‌ಡೌನ್‌ ಆದಾಗಿನಿಂದ ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಒಂದು ತಿಂಗಳ ಆಹಾರ ಧಾನ್ಯವನ್ನು ನೀಡುತ್ತಿದ್ದೇವೆ ಎಂದರು.

Advertisement

ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ಪಿಡಿಒಗಳ ಸಭೆ ಕರೆದು, ಗ್ರಾಮಗಳಲ್ಲಿನ ಜನರು ಶೌಚಾಲಯವನ್ನು ಬಳಸುವಂತೆ ಸೂಚಿಸಿ, ಯಾರು
ಹೊರಗಡೆ ಹೋಗದಂತೆ ತಿಳಿಸಬೇಕು. ಎಂದು ಉಪಾಧ್ಯಕ್ಷರು ಸೂಚನೆ ನೀಡಿದರು. ಜಿಪಂ ಉಪಕಾರ್ಯದರ್ಶಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next