ರಾಮನಗರ: ಜಿಲ್ಲೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳಸುತ್ತಿರುವ ಗಣಿಗಾರಿಕೆಯನ್ನು ನಿಷೇಧಿಸ ಬೇಕು ಎಂದು ಒತ್ತಾಯಿಸಿ ಸಮತಾ ಸೈನಿಕ ದಳದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಜವರೇಗೌಡ ಅವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಕಲ್ಲುಗಣಿಗಾರಿಕೆ ಸ್ಫೋಟದ ಪ್ರಕರಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗಣಿಗಾರಿಕೆಯಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಮತಾ ಸೈನಿಕ ದಳದ ಯುವ ಘಟಕದ ಅಧ್ಯಕ್ಷ ಡಾ.ಜಿ.ಗೋವಿಂದಯ್ಯ, ಶಿವಮೊಗ್ಗದ ಘಟನೆಯಿಂದಾಗಿ ಇಡೀ ರಾಜ್ಯವೇ ಬೆಚ್ಚು ಬಿದ್ದಿದೆ. ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ರಾಮನಗರ ಜಿಲ್ಲೆಯಲ್ಲಿ 100ರಕ್ಕೂ ಗಣಿಗಾರಿಕೆ ನಡೆಯುತ್ತಿದೆ. ಸುರಕ್ಷತೆಯ ಬಗ್ಗೆ ಜನ ಅತಂಕಗೊಂಡಿದ್ದಾರೆ ಎಂದರು.
ಕಲ್ಲುಗಣಿಗಾರಿಕೆ ನಡೆಯುತ್ತಿರುವ ಜಾಗದಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗ್ರಾಮಗಳ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅಲ್ಲಿರುವ ಗ್ರಾಮಗಳ ಕೆಲವು ಕಟ್ಟಡಗಳು ಬಿರುಕು ಬಿಟ್ಟಿವೆ ಎಂದು ದೂರಿದರು. ಗಣಿಗಾರಿಕೆಯ ವಿಚಾರದಲ್ಲಿ ನಿರಂತರ ಗಮನ ಹರಿಸಿ ಎಂದು ತಮ್ಮ ಸಂಘಟನೆ ಹಲವು ಬಾರಿ ಗಮನ ಸೆಳೆದರು, ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿಕುಳಿತುಕೊಂಡಿದ್ದಾರೆ. ಹಲವು ಕಡೇ ದಿನದ 24 ಗಂಟೆಯು ಗಣಿಗಾರಿಕೆ ನಡೆಸಲಾಗುತ್ತಿದೆ. ಗಣಿ ಇಲಾಖೆಯ ಅಧಿಕಾರಿಗಳ ಸಹಕಾರವಿಲ್ಲದೆ ಇವೆಲ್ಲ ನಡೆಯುವುದಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ ಎಂದರು.
ಇದನ್ನೂ ಓದಿ:ಕುಷ್ಠ ರೋಗದ ಅವೈಜ್ಞಾನಿಕ ನಂಬಿಕೆ ಹೋಗಲಾಡಿಸಿ
ಸಮತಾ ಸೈನಿಕ ದಳದ ಪ್ರಮುಖರಾದ ಕೋಟೆ ಶ್ರೀನಿವಾಸ್, ಮರಳವಾಡಿ ಮಂಜು, ಲಕ್ಷ್ಮಣ್, ಸತ್ಯಮೂರ್ತಿ, ನಾಗೇಶ್ ಹಲವರು ಇದ್ದರು