Advertisement

ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ: ಶಾಸಕ ಡಾ.ಭರತ್ ಶೆಟ್ಟಿ ವೈ

12:22 PM Jul 29, 2022 | Team Udayavani |

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯ ನೆಪದಲ್ಲಿ ರಾತ್ರೋ ರಾತ್ರಿ ಮನೆಗೆ ನುಗ್ಗಿ ಅಮಾಯಕರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದು. ನೈಜ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಪೊಲೀಸ್ ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

Advertisement

ಗೃಹ ಸಚಿವರು ಈಗಾಗಲೇ ಸೂಕ್ತ ತನಿಖೆ ಮಾಡಲು ಆದೇಶ ನೀಡಿದ್ದಾರೆ. ವಿನಾಕಾರಣ ರಾತ್ರೋರಾತ್ರಿ ಮನೆಗಳಿಗೆ ನುಗ್ಗಿ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುವುದು ಸರಿಯಲ್ಲ.ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ  ನೈಜ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಯೋನ್ಮುಖವಾಗಬೇಕು ಎಂದು ಒತ್ತಾಯಿಸಿ, ಕ್ಷೇತ್ರದಲ್ಲಿ ಶಾಂತಿ ಕಾಪಾಡಲು ಸಾರ್ವಜನಿಕರು  ಸಹಕರಿಸಬೇಕು  ಎಂದರು.

ಕಾಂಗ್ರೆಸ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರು ಸುರತ್ಕಲ್ ನಲ್ಲಿ ನಡೆದ ಹತ್ಯೆಯ ಕುರಿತಂತೆ ಕೋಮು ಭಾವನೆ ಕೆರಳಿಸುವ ರೀತಿ ಹೇಳಿಕೆಯನ್ನು ನೀಡಿರುವುದನ್ನು ಖಂಡಿಸುತ್ತೇನೆ. ಪೊಲೀಸರು ಪ್ರಾಥಮಿಕ ತನಿಖೆ  ನಡೆಸುತ್ತಿರುವಾಗಲೇ ಮಾಜಿ ಶಾಸಕರು ದುಷ್ಕರ್ಮಿಗಳನ್ನು ಹಿಂದುಗಳು ಎಂಬ ಭಾವನೆಯಲ್ಲಿ ಮಾತನಾಡಿ ಕೋಮು ವೈಶಮ್ಯ ಕೆರಳಿಸುವ ಯತ್ನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವರಾಗಿ ಯು.ಟಿ ಖಾದರ್ ಅವರು ಸಂಯಮದಿಂದ ವರ್ತಿಸಿ ಶಾಂತಿ ಸೌಹಾರ್ದತೆಗೆ ಸಹಕರಿಸಬೇಕು. ಪ್ರಚೋದನಾತ್ನಕ ಹೇಳಿಕೆ ಸರಿಯಲ್ಲ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next