Advertisement
ನಿಪ ವೈರಸ್ ತಡೆಗೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಲಾದ ವಿವಿಧ ಇಲಾಖಾ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.
Related Articles
ಹಂದಿ ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಬೇಕು. ಈ ಕುರಿತು ಸೂಕ್ತ ಕ್ರಮವನ್ನು ನಗರ ಸ್ಥಳೀಯ ಸಂಸ್ಥೆಗಳು ಕೂಡಲೇ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
Advertisement
ಮಾಹಿತಿ ನೀಡಿ: ನಿಪ ವೈರಸ್ ರೋಗದ ಲಕ್ಷಣ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಈಗಾಗಲೇ ಪ್ರತ್ಯೇಕ ವೈರಲ್ ವಾರ್ಡ್ ಆರಂಭಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.
ರೋಗದ ಲಕ್ಷಣಗಳು: ನಿಪ ವೈರಸ್ ಬಾಧಿತರಿಗೆ ಜ್ವರ, ತಲೆ ನೋವು, ವಾಂತಿ, ತಲೆ ಸುತ್ತುವಿಕೆ ಪ್ರಥಮ ಹಂತದಲ್ಲಿ ಕಾಣಿಸಿಕೊಳ್ಳುವುದು. ಬಳಿಕ ಪ್ರಜ್ಞಾಹೀನತೆಗೆ ಒಳಗಾಗುವರು. ಅತಿಯಾದ ಜ್ವರ ಮೆದುಳಿಗೆ ವ್ಯಾಪಿಸುವುದು, ಮಾತುಗಳಲ್ಲಿ ತೊದಲುವಿಕೆ ಹಾಗೂ ಅಪಸ್ವರದ ಲಕ್ಷಣ ಕಾಣಿಸಿಕೊಳ್ಳುತ್ತದೆ. ಕೆಲವು ಬಾರಿ ಸೂಕ್ತ ಚಿಕಿತ್ಸೆ ಲಭಿಸದಿದ್ದಲ್ಲಿ ಸಾವು ಸಂಭವಿಸಬಹುದು.
ಸೋಂಕಿತ ದಿನದಿಂದ 4ರಿಂದ 18ದಿನಗಳಲ್ಲಿ ನಿಪ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ ಎಂದು ಮಾಹಿತಿ ನೀಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಬಿ.ಸಿ ವೆಂಕಟೇಶ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.
ರೋಗದ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ. ಆದರೆ ರೋಗ ಹರಡದಂತೆ ಎಲ್ಲಾ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಆರೋಗ್ಯ ಇಲಾಖೆ, ಪಶು ಸಂಗೋಪನಾ ಇಲಾಖೆ, ಸ್ಥಳೀಯ ಆಡಳಿತ ಸಮನ್ವಯದಿಂದಕಾರ್ಯನಿರ್ವಹಿಸಬೇಕು. ಆಶಾ ಕಾರ್ಯಕರ್ತೆಯರು, ಸ್ವಸಹಾಯ ಗುಂಪಿನ ಸದಸ್ಯರು ಗ್ರಾಮೀಣ ಮಟ್ಟದಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಚನ್ನಬಸಪ್ಪ, ಅಪರ ಜಿಲ್ಲಾಧಿಕಾರಿ