Advertisement

ನೀರು ಸಮಸ್ಯೆ ತಡೆಗೆ ಕ್ರಮ ಕೈಗೊಳ್ಳಿ

07:25 AM Mar 15, 2018 | Team Udayavani |

ಉಡುಪಿ: ನಗರದ ಜನರಿಗೆ ಬೇಸಗೆಯಲ್ಲಿ ನೀರಿನ ಸಮಸ್ಯೆ ಕಾಡದಂತೆ ನಿರ್ವಹಿಸಲು ಅಧಿಕಾರಿಗಳು ಯೋಜಿತವಾಗಿ ನೀರು ಹಂಚಿಕೆ ಮಾಡಲು ಸಜ್ಜಾಗಿ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಅವರು ಬುಧವಾರ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆದಾಗ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿದರೆ, ಸರಿಯಾಗಿ ಸ್ಪಂದಿಸಬೇಕು. ಎತ್ತರದ ಪ್ರದೇಶದ ಮನೆಗಳಿಗೆ ನೀರು ಸರಬರಾಜು ಸಮಸ್ಯೆ ಉಂಟಾದರೆ ಟ್ಯಾಂಕರ್‌ ವ್ಯವಸ್ಥೆ ಹಾಗೂ ವಿದ್ಯುತ್‌ ಸಮಸ್ಯೆ ಕೂಡ ಆಗದಂತೆ ನೋಡಿಕೊಳ್ಳಬೇಕೆಂದು ಅವರು ಹೇಳಿದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್‌, ಪೌರಾಯುಕ್ತ ಡಿ. ಮಂಜುನಾಥಯ್ಯ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next