Advertisement
ಕುಡಿಯುವ ನೀರು, ಮೇವು ಹಾಗೂ ಉದ್ಯೋಗ ಸೃಜನೆ ಸಮಸ್ಯೆ ಪರಾಮರ್ಶಿಸಲು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
•11 ಮೇವು ಬ್ಯಾಂಕ್: ಜಿಲ್ಲೆಯಲ್ಲಿ ಒಟ್ಟು 11 ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದೆ. ಇದರಲ್ಲಿ ಒಟ್ಟು 219.70 ಮೆಟ್ರಿಕ್ ಟನ್ ಮೇವು ಸಂಗ್ರಹವಾಗಿದೆ. 199.10 ಮೆಟ್ರಿಕ್ ಟನ್ ಮೇವು ಖರ್ಚಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ 107710 ಮೆಟ್ರಿಕ್ ಟನ್ ಮೇವು ಲಭ್ಯ ಇದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಅಗತ್ಯವಿದ್ದರೆ ಗೋಶಾಲೆ ಆರಂಭಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
•ಕಾಡು ಪ್ರಾಣಿಗಳಿಗೆ ನೀರು: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳಿಗೂ ನೀರಿನ ತೊಂದರೆಯಾಗುತ್ತಿದೆ ಎಂಬ ವರದಿ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೂಡಲೇ ಗಮನ ಕೊಡಬೇಕು. ಜಿಲ್ಲೆಯಲ್ಲಿ ಎಲ್ಲೆಲ್ಲೆ ಎಷ್ಟು ಕಾಡು ಪ್ರಾಣಿಗಳಿವೆ? ಎಷ್ಟು ಸಿಮೆಂಟ್ ತೊಟ್ಟಿಗಳನ್ನು ಹಾಕಬೇಕಾಗುತ್ತದೆ ಎಂಬುದರ ಬಗ್ಗೆ ಕೂಡಲೇ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗೆ ಸೂಚಿಸಿದರು. ಇದಕ್ಕಾಗಿ 9 ಲಕ್ಷ ರೂ.ಗಳು ಬೇಕಾಗುತ್ತದೆ ಎಂದು ಅರಣ್ಯ ಅಧಿಕಾರಿ ಪ್ರತಿಕ್ರಿಯಿಸಿದರು.
•ರೋಗಬಾರದಂತೆ ನೋಡಿಕೊಳ್ಳಿ: ಬಾವಿ ಮತ್ತು ಟ್ಯಾಂಕರ್ ಮೂಲಕ ಪೂರೈಸುವಾಗ ಆಕಸ್ಮಿಕವಾಗಿ ನೀರು ಕಲುಷಿತಗೊಂಡು ಕೆಲವೊಮ್ಮೆ ಕಾಯಿಲೆ ಬರುವ ಸಾದ್ಯತೆ ಇರುತ್ತದೆ. ಈ ಬಗ್ಗೆ ಎಲ್ಲ ತಾಲೂಕುಗಳಲ್ಲಿ ಆರೋಗ್ಯಾಧಿಕಾರಿಗಳು ಗಮನ ಕೊಡಬೇಕು. ಆಯಾ ಕಡೆಗಳಲ್ಲಿ ಬಾವಿಗಳು, ಟ್ಯಾಂಕುಗಳಲ್ಲಿನ ನೀರನ್ನು ಕಾಲಕಾಲಕ್ಕೆ ಪರೀಕ್ಷಿಸಿ ಕುಡಿಯಲು ಶುದ್ಧವಾಗಿದೆಯೇ ಇಲ್ಲೋ ಎಂಬುದರ ಬಗ್ಗೆ ವರದಿ ನೀಡಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗೆ ನಿರ್ದೇಶನ ನೀಡಿದರು.
•ಸಮಸ್ಯೆ ಇರುವ ಸ್ಥಳಗಳ ವರದಿ ನೀಡಿ: ಬೀದರ ನಗರಸಭೆ ವ್ಯಾಪ್ತಿಯಲ್ಲಿ ಹೊಸ ಕೊಳವೆಬಾವಿ ಕೊರೆಸಲು ಅನುಮತಿ ನೀಡುತ್ತಿಲ್ಲ. ಇದರಿಂದ ಸಹಜವಾಗಿ ಕೆಲ ಪ್ರದೇಶಗಳಲ್ಲಿ ನೀರಿಗಾಗಿ ಸಮಸ್ಯೆಯಾಗಿರಬಹುದು. ಯಾವ ಯಾವ ಕಡೆಗಳಲ್ಲಿ ನೀರಿಗೆ ಸಮಸ್ಯೆಯಾಗಿದೆ ಎಂದು ಗುರುತಿಸಿ ಆಯಾ ಸ್ಥಳಗಳ ಪಟ್ಟಿ ಸಿದ್ದಪಡಿಸಿ ವರದಿ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
•ಸಹಾಯವಾಣಿ ಕರೆಗೆ ಸ್ಪಂದಿಸಿ: ಬರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ತೆರೆಯಲಾದ ಸಹಾಯವಾಣಿ ಕೇಂದ್ರಗಳು ದಿನದ 24 ಗಂಟೆಯೂ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಬೇಕು. ಸ್ವೀಕರಿಸುವ ದೂರುಗಳನ್ನು ಶೀಘ್ರ ಇತ್ಯರ್ಥಗೊಳಿಸಲು ಅಧಿಕಾರಿಗಳು ಪ್ರ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಹಾಯವಾಣಿ ಕೇಂದ್ರಗಳಿಗೆ ಬರುವ ಎಲ್ಲ ಕರೆಗಳ ಮಾಹಿತಿ ದಾಖಲಿಸಬೇಕು. ಜನರು ಕರೆ ಮಾಡಿ ತಮ್ಮ ಸಮಸ್ಯೆ ತಿಳಿಸಲು ಅನುಕೂಲವಾಗುವಂತೆ ಸಹಾಯವಾಣಿಗಳಿಗೆ ಹೆಚ್ಚಿನ ಪ್ರಚಾರ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ವಾರ್ತಾಧಿಕಾರಿಗೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಬೀದರ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರಾದ ಡಾ.ಶಂಕರ ವಣಕ್ಯಾಳ, ಗ್ಯಾನೇಂದ್ರಕುಮಾರ ಗಂಗವಾರ, ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.