Advertisement

ನೀರಿನ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಿ

02:26 PM Aug 02, 2019 | Team Udayavani |

ಕಾರಟಗಿ: ಪಟ್ಟಣದ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಪುರಸಭೆ ಆಡಳಿತಾಧಿಕಾರಿ ಸಿಡಿ ಗೀತಾ ಹೇಳಿದರು.

Advertisement

ಪಟ್ಟಣದ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ, ಕೆಲ ವಾರ್ಡ್‌ಗಳಲ್ಲಿ ಅವಶ್ಯವಿರದ ಅಂಗನವಾಡಿ ಕೇಂದ್ರಗಳನ್ನು ಆಯಾ ವಾರ್ಡ್‌ ಸದಸ್ಯರ ಅನುಮತಿ ಪಡೆದು ರದ್ದು ಪಡಿಸಿ, ಅಗತ್ಯವಿರುವ ವಾರ್ಡ್‌ಗಳಲ್ಲಿನ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ಧಿಪಡಿಸಿ ಸ್ವಂತ ಕಟ್ಟಡ ನಿರ್ಮಿಸಲು ಅವಕಾಶ ಕಲ್ಪಿಸಬೇಕು. ಅಲ್ಲದೆ ಪುರಸಭೆ ಸಿಬ್ಬಂದಿ ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ, ಸಾರ್ವಜನಿಕರಿಗೆ ತೊಂದರೆ ನೀಗಿಸಿ ಎಂದು ಕಂದಾಯ ಅಧಿಕಾರಿಗೆ ಸೂಚಿಸಿದರು.

ಆಡಳಿತಾಧಿಕಾರಿ ಸಿ.ಡಿ. ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 2019-20ನೇ ಸಾಲಿನ ಕ್ರಿಯಾಯೋಜನೆಗೆ ಆಡಳಿತಾತ್ಮಕ ಮಂಜೂರಾತಿ ಪಡೆಯಲಾಯಿತು.

ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಹೈಮಾಸ್ಟ್‌ ವಿದ್ಯುತ್‌ ದೀಪ ಅಳವಡಿಸುವ ಕಾಮಗಾರಿ ನಡೆದಿದ್ದು, ಇನ್ನು ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಬಲ್ಬ್ಗಳನ್ನು ಅಳವಡಿಸಲಾಗುವುದು ಎಂದು ಮುಖ್ಯಾಧಿಕಾರಿ ಶಿವಲಿಂಗಪ್ಪ ತಿಳಿಸಿದರು. ಅಲ್ಲದೇ ಹಿಂದಿನ ಠರಾವುಗಳಲ್ಲಿ ಕೆಲವೊಂದನ್ನು ಹೊರತು ಪಡಿಸಿ ಉಳಿದ ಠರಾವುಗಳಿಗೆ ಅನುಮೋದನೆ ನೀಡಲಾಯಿತು. ಬೋರ್‌ವೆಲ್ಗಳ ದುರಸ್ತಿಗಾಗಿ 8 ಲಕ್ಷ ರೂ. ಗಳನ್ನು ಸದಸ್ಯರ ಗಮನಕ್ಕೆ ತರದೇ ಖರ್ಚು ಮಾಡಲಾಗಿದೆ ಮುಂದಿನ ದಿನಗಳಲ್ಲಿ ವಾರ್ಷಿಕ ಟೆಂಡರ್‌ ಮೂಲಕ ಬೋರವೆಲ್ಗಳ ದುರಸ್ತಿ ಕಾರ್ಯ ನಡೆಸಬೇಕೆಂದು ಸದಸ್ಯರು ಸಭೆಯಲ್ಲಿ ತಿಳಿಸಿದರು.

14ನೇ ಹಣಕಾಸು ಯೋಜನೆಯಡಿ 3.23 ಕೋಟಿಯಲ್ಲಿ ಕೆಲವೊಂದನ್ನು ತಿದ್ದುಪಡಿ ಮಾಡಿ ಟೆಂಡರ್‌ ಕರೆಯಲು ಅನುಮತಿ ನೀಡಲಾಯಿತು. ಸದಸ್ಯರು ಕೆಲವೊಂದು ವಿಷಯಗಳ ಬಗ್ಗೆ ಪುರಸಭೆ ಅಧಿಕಾರಿಗಳು ಸದಸ್ಯರ ಗಮನಕ್ಕೆ ತರುತ್ತಿಲ್ಲ ಎಂದು ದೂರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next