Advertisement

ಸರ್ಕಾರಿ ಯೋಜನೆ ಸದ್ಬಳಸಿಕೊಳ್ಳಿ

03:22 PM Aug 23, 2019 | Suhan S |

ಮದ್ದೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸಬಲೀಕರಣಕ್ಕೆ ಹಲವು ಸವಲತ್ತುಗಳನ್ನು ನೀಡುತ್ತಿದ್ದು ಅವು ಸದ್ಬಳಸಿಕೊಂಡು ಆರ್ಥಿಕಾಭಿವೃದ್ಧಿ ಹೊಂದುವಂತೆ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್‌. ನಾಗೇಶ್‌ ತಿಳಿಸಿದರು.

Advertisement

ತಾಲೂಕಿನ ಬಸವನಪುರ ಗ್ರಾಮದಲ್ಲಿ ನೆಹರು ಯುವ ಕೇಂದ್ರ, ಸರಸ್ವತಿ ಮಹಿಳಾ ಮಂಡಳಿ ಆಯೋಜಿಸಿದ್ದ ವೃತ್ತಿ ತರಬೇತಿ ಕೇಂದ್ರ ಉದ್ಘಾಟನೆ ಹಾಗೂ ಸತ್ಯ ಭಾರತ ಮತ್ತು ಜಲ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುನ್ನತ ಸಾಧನೆ ಮಾಡುತ್ತಿರುವುದು ಸಂತಸದ ವಿಚಾರ.

ಸರ್ಕಾರ ಮಹಿಳೆಯರ ಅಭ್ಯುದಯಕ್ಕೆ ಮತ್ತು ಸ್ವ ಉದ್ಯೋಗ ಕೈಗೊಳ್ಳಲು ಕೋಟ್ಯಂತರ ರೂ. ಹಣ ವೆಚ್ಚ ಮಾಡುತ್ತಿದೆ. ವಿವಿಧ ಯೋಜನೆಗಳಡಿ ಕೌಶಲ್ಯ ತರಬೇತಿಯನ್ನೂ ನೀಡುತ್ತಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಂಡು ಆರ್ಥಿಕ ಸುಧಾರಣೆ ಕಂಡುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಹೈನುಗಾರಿಕೆ, ಗುಡಿ ಕೈಗಾರಿಕೆ, ಹೊಲಿಗೆ ಯಂತ್ರ, ಗಾರ್ಮೆಂಟ್ಸ್‌ ತರಬೇತಿ ಮತ್ತು ಸ್ವಸಹಾಯ ಸಂಘಗಳಲ್ಲಿ ಹಲವು ತರಬೇತಿಗಳನ್ನು ನೀಡುತ್ತಿದ್ದು, ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾ ಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರುವಂತೆ ತಿಳಿಸಿದರು.

ಈ ವೇಳೆ ಗ್ರಾಪಂ ಅಧ್ಯಕ್ಷೆ ಮಮತಾ, ಮಾಜಿ ಅಧ್ಯಕ್ಷ ಕೆ.ಎನ್‌.ಪ್ರಭು, ಮುಖಂಡರಾದ ಹೊನ್ನಲಗೇಗೌಡ, ಎನ್‌.ಪ್ರಸನ್ನ, ಕೆ.ಎಸ್‌.ಸತೀಶ್‌, ಜಿಲ್ಲಾ ಸಮನ್ವಯಾಧಿಕಾರಿ ಅನಂತಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next