Advertisement

ಯೋಜನೆಗಳ ಲಾಭ ಪಡೆದುಕೊಳ್ಳಿ

10:17 AM Jun 07, 2018 | |

ಅಫಜಲಪುರ: ರೈತರು ಸಾಂಪ್ರದಾಯಿಕ ಬೇಸಾಯ ಪದ್ಧತಿ ಬಿಟ್ಟು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ ಹಾಗೂ ಇಲಾಖೆಯ ಯೋಜನೆಗಳ ಲಾಭ ಪಡೆದುಕೊಂಡು ಹೆಚ್ಚು ಲಾಭ ಪಡೆದುಕೊಳ್ಳಬೇಕೆಂದು ಸಹಾಯಕ ಕೃಷಿ ನಿರ್ದೇಶಕ
ಶರಣಗೌಡ ಪಾಟೀಲ ಹೇಳಿದರು.

Advertisement

ತಾಲೂಕಿನ ಅತನೂರ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ನಡೆದ 2018-19ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಯೋಜನೆಯಡಿ ರೈತರೊಂದಿಗೆ ಕೃಷಿ ವಿಜ್ಞಾನಿಗಳೊಂದಿಗೆ ಸಂವಾದ ಮತ್ತು ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಈ ಪ್ರದರ್ಶನ ಹಾಗೂ ಸಂವಾದ ಕಳೆದ ಮೂರು ವರ್ಷಗಳಿಂದ ನಡೆಯುತ್ತಿದೆ. ರೈತರಿಗೆ ಸರ್ಕಾರದ ಯೋಜನೆಗಳ ಉದ್ದೇಶ ತಿಳಿಸುವುದು ಮತ್ತು ರೈತರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.
 
ಮುಂಗಾರು ಹಂಗಾಮಿನ ಬಿತ್ತನೆಗಾಗಿ ಜಮೀನು ಹದ ಮಾಡಿಕೊಂಡಿದ್ದಿರಿ. ಬಿತ್ತನೆಗೆ ಬೇಕಾದ ಬೀಜ ಮತ್ತು ರಸಗೊಬ್ಬರ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಇದೆ. ರೈತರು ರಿಯಾಯ್ತಿ ದರದಲ್ಲಿ ಬೀಜ ಖರೀದಿಸಿ ಬಿತ್ತನೆ ಮಾಡಬಹುದಾಗಿದೆ ಎಂದರು. 

ಕೃಷಿ ಇಲಾಖೆ ಸಹಾಯಕ ಅಧಿಕಾರಿ ಕವಿತಾ ಯರಗಲ್‌, ಪ್ರಗತಿಪರ ರೈತ ಲತೀಫ್‌ ಪಟೇಲ ಮಾತನಾಡಿದರು. ಬಸಯ್ಯ ಹಿರೇಮಠ, ಗುರುರಾಜ ಸಂಗಾವಿ ಹಾಗೂ ಅತನೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು
ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next