ದಾವಣಗೆರೆ: ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಶಾಲಾ ಕಾಲೇಜು ಪ್ರಾರಂಭಿಸುವ ಕುರಿತಾಗಿ ಶಿಕ್ಷಣ ಸಚಿವರು ಮೊದಲು ಸಂಪುಟದ ಸಲಹೆ ಪಡೆಯಲಿ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ಹೇಳಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ವ್ಯಾಪಿಸುವಿಕೆ ಹಿನ್ನೆಲೆಯಲ್ಲಿ ಸಂಸತ್ ಹಾಗೂ ವಿಧಾನ ಮಂಡಲದ ಅಧಿವೇಶನಗಳನ್ನು ಮೊಟಕು ಗೊಳಿಸಲಾಗಿದೆ. ಸಂಸದರು, ಶಾಸಕರಿಗೆ ಒಂದು ನ್ಯಾಯ. ವಿದ್ಯಾರ್ಥಿಗಳಿಗೆ ಮತ್ತೊಂದು ನ್ಯಾಯದ ದ್ವಂದ್ವ ಏಕೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ವಿಧಾನ ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ: ಅ.28ರಂದು ಚುನಾವಣೆ
ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ಆತ್ಮನಿರ್ಭರ ಎಂಬುದು ಆತ್ಮಹತ್ಯೆಯ ಭಾರತ ನಿರ್ಮಾಣ ಎನ್ನುವಂತಾಗಿದೆ. ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಆತ್ಮನಿರ್ಭರ ಯೋಜನೆಯಡಿ 20 ಲಕ್ಷ ಕೋಟಿ ಪ್ಯಾಕೇಜ್ ನಿಂದ ಶೇ. 1 ಪ್ರಮಾಣದ ಜನರಿಗೆ ಮಾತ್ರ ನೇರವಾದ ಪ್ರಯೋಜನ ದೊರೆತಿದೆ. ಅಮೆರಿಕಾ ಶೇ. 20, ಜಪಾನ್ ಶೇ. 7 ರಷ್ಟು ಪ್ರಮಾಣದಲ್ಲಿ ಜನರಿಗೆ ನೇರ ನೆರವು ನೀಡಿವೆ. ದೇಶದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜಿಡಿಪಿ ಮೈನಸ್ 23.9 ತಲುಪಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ದೂರಿದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ