Advertisement

ಅಲ್ಬೆಂಡೋಜೋಲ್‌ ಮಾತ್ರೆ ಸೇವಿಸಿ

04:29 PM Aug 11, 2022 | Team Udayavani |

ಧಾರವಾಡ: ಜಂತುಹುಳು ಭಾದೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ಮಕ್ಕಳ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಜಂತುಹುಳು ನಾಶಕ ಅಲ್ಬೆಂಡೋಜೋಲ್‌ ಮಾತ್ರೆ ನೀಡುವುದು ಮಕ್ಕಳ ಆರೋಗ್ಯಕ್ಕೆ ಪರಿಣಾಮಕಾರಿಯಾಗಿದೆ ಎಂದು ಜಿಪಂ ಸಿಇಒ ಡಾ|ಸುರೇಶ ಇಟ್ನಾಳ ಹೇಳಿದರು.

Advertisement

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆಯಿಂದ ನಗರದ ಶಿಕ್ಷಕಿಯರ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಂತು ಹುಳುವಿನಿಂದ ಮಗುವಿನಲ್ಲಿ ದೈಹಿಕ ನಿಶ್ಯಕ್ತಿ ಉಂಟಾಗಿ ಆಟ, ಪಾಠ, ಓದು ಸೇರಿದಂತೆ ಇತರೆ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಜಂತುಹುಳುಗಳ ನಿವಾರಣೆಯಿಂದ ಮಕ್ಕಳಲ್ಲಿ ವೈಯಕ್ತಿಕವಾಗಿ ರೋಗನಿರೋಧಕ ಶಕ್ತಿ, ಓದಿನಲ್ಲಿ ಏಕಾಗ್ರತೆ, ದಿನನಿತ್ಯದ ನಡುವಳಿಕೆಯಲ್ಲಿ ಸುಧಾರಣೆ ಮತ್ತು ಸಮುದಾಯದಲ್ಲಿ ಜಂತುಹುಳುವಿನ ಬಾಧೆಯ ತೊಂದರೆ ತಡೆಗಟ್ಟುವಲ್ಲಿ ಸಹಾಯಕವಾಗುತ್ತದೆ. ವಿದ್ಯಾರ್ಥಿಗಳು ಶುಚಿತ್ವ ಕಾಪಾಡಿಕೊಳ್ಳಬೇಕು. ಶಾಲೆಗಳಲ್ಲಿ ಪ್ರತಿಯೊಂದು ಮಗುವಿಗೂ ತಪ್ಪದೇ ಜಂತುಹುಳು ನಿವಾರಣಾ ಮಾತ್ರೆ ಅಲ್ಬಂಡೋಜೋಲ್‌ ನುಂಗಿಸುವುದು ಆರೋಗ್ಯ ಇಲಾಖೆಯ ಕರ್ತವ್ಯವಾಗಿದೆ ಎಂದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಬಿ.ಸಿ ಕರಿಗೌಡರ ಮಾತನಾಡಿ, ಜಂತುಹುಳು ನಿವಾರಣಾ ಕಾರ್ಯಕ್ರಮ ಅಂಗವಾಗಿ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಜಂತುಹುಳು ನಿವಾರಣಾ ಮಾತ್ರೆ ಅಲ್ಬೆಂಡೋಜೋಲ್‌ ಅನ್ನು 1ರಿಂದ 19 ವರ್ಷ ವಯಸ್ಸಿನ ಮಕ್ಕಳಿಗೆ ಮತ್ತು ಹದಿಹರೆಯದವರಿಗೆ ಮನೆಗಳಲ್ಲಿ ನೀಡಲಿದ್ದಾರೆ. ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿ ವರ್ಷ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆ ವಿತರಿಸಲಾಗುತ್ತಿದೆ ಎಂದರು. ಜಿಲ್ಲಾ ಆರ್‌ಸಿಎಚ್‌ಓ ಅಧಿಕಾರಿ ಡಾ|ಎಸ್‌.ಎಂ. ಹೊನಕೇರಿ ಪ್ರಾಸ್ತಾವಿಕ ಮಾತನಾಡಿದರು.

ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಸ್‌. ಎಸ್‌.ಕೆಳದಿಮಠ, ತಾಲೂಕು ವೈದ್ಯಾಧಿಕಾರಿ ಡಾ|ಕೆ.ಎನ್‌. ತನುಜಾ, ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ, ಪ್ರಾಚಾರ್ಯ ಬಿ.ಎಂ. ಬಡಿಗೇರ, ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್‌ .ಪಾತ್ರೋಟ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next