Advertisement

ಹಿರಿಯರು-ಮಕ್ಕಳ ಕಾಳಜಿ ವಹಿಸಿ

09:21 AM Jul 11, 2020 | Suhan S |

ಕಲಬುರಗಿ: ಮಹಾನಗರ ಮತ್ತು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ದಿನದಿಂದ ದಿನಕ್ಕೆ ಇನ್ಫ್ಲುಂಯೆಂಜಾ ಲೈಕ್‌ ಇಲ್‌ನೆಸ್‌ (ಐಔಐ) ಮತ್ತು ತೀವ್ರ ಉಸಿರಾಟದ ತೊಂದರೆ ಪ್ರಕರಣಗಳು ಸೇರಿದಂತೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶರತ್‌ ಬಿ. ಸಭೆ ನಡೆಸಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚಿರ್ಚಿಸಿದರು. ಜಿಲ್ಲೆಯಲ್ಲಿ ಇದು ವರೆಗೆ ಜು.9ರ ವರೆಗೆ 1,901 ಜನರಿಗೆ ಕೋವಿಡ್ ಸೋಂಕು ಕಂಡು ಬಂದಿದ್ದು, ಇದರಲ್ಲಿ 30 ಜನ ನಿಧನ ಹೊಂದಿದ್ದಾರೆ. ಕಳೆದ 15 ದಿನಗಳಲ್ಲಿ ಹೆಚ್ಚಿನ ಕೋವಿಡ್ ಪಾಸಿಟಿವ್‌ ಸಂಖ್ಯೆಗಳ ಜೊತೆಗೆ ಸಾವಿನ ಸಂಖ್ಯೆಯು ಹೆಚ್ಚುತ್ತಿದೆ. ಆದ್ದರಿಂದ ರೋಗಿಗಳಿಗೆ ಮುಂದಿನ ದಿನದಲ್ಲಿ ಹೆಚ್ಚಿನ ಗುಣಮಟ್ಟದ ವೈದ್ಯಕೀಯ ವ್ಯವಸ್ಥೆ, ಹಾಸಿಗೆ ಹೆಚ್ಚಳ ಸೇರಿದಂತೆ ಆಸ್ಪತ್ರೆಗಳ ಮೂಲ ಸೌಲಭ್ಯ ಹೆಚ್ಚಿಸುವ ಸಂಬಂಧ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.

ಐಎಲ್‌ಐ ಹಾಗೂ ಸಾರಿ ಸಂಖ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಜಿಲ್ಲಾಡತವು ಎಲ್ಲ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಸಾರ್ವಜನಿಕರು ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಹಾಗೂ ಶುಚಿತ್ವ ಕಾಪಾಡುವುದೇ ಕೋವಿಡ್ ತಡೆಯಲು ಸಾಧ್ಯವಾಗಲಿದೆ. ಜಿಲ್ಲೆಯ ಜನತೆ ಇದನ್ನು ತಪ್ಪದೇ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಅನಗತ್ಯ ಓಡಾಟ ಹಾಗೂ ಗುಂಪಾಗಿ ಸೇರಬಾರದು. ಆಗಾಗ ಸಾಬೂನುನಿಂದ ಕೈತೊಳೆದುಕೊಳ್ಳಬೇಕು ಮತ್ತು ಮನೆಯ ಸುತ್ತಮುತ್ತ ಪರಿಸರ ಸ್ವತ್ಛವಾಗಿಟ್ಟುಕೊಳ್ಳಬೇಕು. ಮನೆಯಲ್ಲಿ ದೀರ್ಘ‌ ಕಾಯಿಲೆಯಿಂದ ಬಳಲುತ್ತಿರುವವರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಇದ್ದಲ್ಲಿ ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರು ವಿಶೇಷ ಕಾಳಜಿ ವಹಿಸಬೇಕು. ಹೊರಗಡೆಯಿಂದ ಮನೆಗೆ ಹೋದ ನಂತರ ನೇರವಾಗಿ ರೋಗ ಪೀಡಿತರನ್ನು ಭೇಟಿಯಾಗಬಾರದು ಎಂದು ಸಲಹೆ ನೀಡದರು.

ಕ್ವಾರಂಟೈನ್‌ ಉಲ್ಲಂಘನೆ ಸಲ್ಲ: ಅನ್ಯ ರಾಜ್ಯದಿಂದ ಬಂದವರು ಅಥವಾ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಒಳಗಾದವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ ಕಡ್ಡಾಯವಾಗಿದ್ದು, ಯಾರಾದರೂ ಇದನ್ನು ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಖಡಕ್‌ ಸೂಚನೆ ನೀಡಿದರು.

Advertisement

ಎಸ್‌ಪಿ ಯಡಾ ಮಾರ್ಟೀನ್‌ ಮಾರ್ಬನ್ಯಾಂಗ್‌, ಡಿಸಿಪಿ ಕಿಶೋರ ಬಾಬು, ಜಿಪಂ ಸಿಇಒ ಡಾ| ಪಿ. ರಾಜಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳಿನ ಅತುಲ್‌, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ಪಾಂಡ್ವೆ, ಡಿಎಚ್‌ಒ ಡಾ| ಎಂ.ಎ. ಜಬ್ಟಾರ್‌, ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ್‌, ಸಹಾಯಕ ಆಯುಕ್ತರಾದ ರಾಮಚಂದ್ರ ಗಡಾದೆ, ರಮೇಶ ಕೋಲಾರ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next