Advertisement
ನಗರದ ಜಿಲ್ಲಾಡಳಿತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ನಡೆದ ಚರ್ಚೆಯಲ್ಲಿ ಮಾತನಾಡಿದ ಸಚಿವರು ನಿವೇಶನ ರಹಿತ ಹಾಗೂ ವಸತಿ ರಹಿತರಿಗೆ ಮನೆಗಳ ಆವಶ್ಯಕತೆಯಿದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
Related Articles
Advertisement
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಸಚಿವರ ಆಪ್ತ ಕಾರ್ಯದರ್ಶಿ ಜಗದೀಶ್, ಪುನರ್ ವಸತಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ಉಪಸ್ಥಿತರಿದ್ದರು.
ಕೊಡಗಿನಲ್ಲಿ 9,976 ವಸತಿಗಳ ಬೇಡಿಕೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಿವೇಶನಕ್ಕೆ 16 ಸಾವಿರ ಹಾಗೂ ವಸತಿಗಾಗಿ 9,976 ಬೇಡಿಕೆ ಇದ್ದು, ನಿವೇಶನ ಹಾಗೂ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡಲು ಮೈತ್ರಿ ಸರಕಾರ ಪ್ರಯತ್ನಿಸುತ್ತಿದೆ ಎಂದು ವಸತಿ ಸಚಿವ ಎಂಟಿಬಿ ನಾಗರಾಜು ಅವರು ಹೇಳಿದರು.
ಪ್ರಕೃತಿ ವಿಕೋಪದಿಂದ ತೊಂದರೆಗೆ ಸಿಲುಕಿದ ನಿರಾಶ್ರಿತರ ಜತೆಗೆ, ಇತರರಿಗೂ ಬಸವ, ಅಂಬೇಡ್ಕರ್, ಡಿ.ದೇವರಾಜ ಅರಸು, ವಸತಿ ಯೋಜನೆ ಮತ್ತು ಪ್ರಧಾನಮಂತ್ರಿ ನಗರ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದರು. ಮನೆ ಕಳೆದುಕೊಂಡ ನಿರಾಶ್ರಿತರಿಗೆ 770 ಮನೆಗಳನ್ನು ವಿವಿಧ ಹಂತದಲ್ಲಿ ನಿರ್ಮಿಸಲಾಗುತ್ತಿದ್ದು, ಶೀಘ್ರ ಮನೆ ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು.