Advertisement

ಗ್ರಾಪಂ ಚುನಾವಣೆ ಗಂಭೀರವಾಗಿ ಪರಿಗಣಿಸಿ

05:58 PM Dec 07, 2020 | Suhan S |

ಭಾಲ್ಕಿ: ತಾಲೂಕಿನಲ್ಲಿ ಗ್ರಾಪಂ ಚುನಾವಣೆಗೆ ದಿನಗಣನೇ ಶುರುವಾಗಿದ್ದು, ಕಾಂಗ್ರೆಸ್‌ ಪಕ್ಷದ ಸಾಧನೆ ಮತ್ತು ನನ್ನ  ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿಪರ ಕೆಲಸಗಳನ್ನು ಜನರಿಗೆ ಪರಿಚಯಿಸಿ 40 ಗ್ರಾಪಂಗಳ 612 ಸ್ಥಾನಗಳ ಪೈಕಿ 550ಕ್ಕೂ ಅಧಿಕ ಕಾಂಗ್ರೆಸ್‌ ಬೆಂಬಲಿತ ಸದಸ್ಯರನ್ನು ಗೆಲ್ಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

Advertisement

ಗ್ರಾಪಂ ಚುನಾವಣೆ ನಿಮಿತ್ತ ತಾಲೂಕು ಕಾಂಗ್ರೆಸ್‌ ಸಮಿತಿ ವತಿಯಿಂದ ಪಟ್ಟಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಪಂ ಚುನಾವಣೆ ಯಾವುದೇ ಪಕ್ಷದ ಚಿಹ್ನೆ ಮೇಲೆ ನಡೆಯದೇ ಇದ್ದರೂ ಕೂಡ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಹಾಗಾಗಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಕಾಂಗ್ರೆಸ್‌ನ ಹಿರಿಯ ಮುಖಂಡರು ಈ ಚುನಾವಣೆಯಲ್ಲಿ ಸ್ಪರ್ಧಿಸಲು ಯುವಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು ಎಂದರು.

ಪ್ರತಿಯೊಂದು ಗ್ರಾಮದಲ್ಲಿ ಕಾಂಗ್ರೆಸ್‌ನ ಒಂದೊಂದೇ ಪೆನಾಲ್‌ ರಚಿಸಿ ಕಾಂಗ್ರೆಸ್‌ ಸರಕಾರದಲ್ಲಿನ ಸಾಧನೆ ಮತ್ತು ನಾನು ಮಂತ್ರಿ ಆಗಿದ್ದ ಸಂದರ್ಭದಲ್ಲಿ ತಂದ ಜನಪರ ಯೋಜನೆಗಳು ಶಾಸಕರ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಪರ ಕೆಲಸಗಳನ್ನು ಜನರಿಗೆ ಮನದಟ್ಟು ಮಾಡಿಕೊಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಬೆಂಬಲಿತ ಸದಸ್ಯರನ್ನು ಗೆಲ್ಲಿಸಿ ಕೊಡಬೇಕು ಎಂದು ತಿಳಿಸಿದರು.

ಡಿ.22ರಂದು ನಡೆಯಲಿರುವ ಗ್ರಾಪಂ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡುವ ಪಂಚಾಯಿತಿಗಳಿಗೆ ವಿಶೇಷ ಅನುದಾನ ನೀಡಲಾಗುವುದು ಎಂದು ಶಾಸಕ ಈಶ್ವರ ಖಂಡ್ರೆ ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್‌ ಅಧ್ಯಕ್ಷ ಹಣಮಂತರಾವ ಚವ್ಹಾಣ, ಜಿಪಂ ಮಾಜಿ ಅಧ್ಯಕ್ಷ ಶಿವರಾಜ ಹಾಸನಕರ್‌, ತಾಪಂ ಮಾಜಿ ಅಧ್ಯಕ್ಷ ಶಿವಕುಮಾರ ದೇಶಮುಖ, ಉಪಾಧ್ಯಕ್ಷ ಶಿವರಾಜ ಪಾಟೀಲ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಡಿವಾಳಪ್ಪ ಮಂಗಲಗಿ, ಪ್ರಮುಖರಾದ ಪ್ರಕಾಶ ಮಾಶೆಟ್ಟೆ, ಅಶೋಕ ಮಡ್ಡೆ, ಅಶೋಕ ಸೋನಜಿ ಇದ್ದರು

Advertisement

Udayavani is now on Telegram. Click here to join our channel and stay updated with the latest news.

Next