Advertisement

ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಿ

05:31 PM Mar 15, 2022 | Team Udayavani |

ದಾವಣಗೆರೆ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಬೇಕು. ಸ್ಥಳಾವಕಾಶ ಇಲ್ಲದಿದ್ದರೆ ಎರಡು ಸ್ಥಳೀಯ ಸಂಸ್ಥೆಗಳು ಕೂಡಿ ಸ್ಥಾಪಿಸಬಹುದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಧ್ಯಕ್ಷ ಸುಭಾಷ್‌ ಬಿ. ಅಡಿ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪರಿಸರ ಅಧಿಕಾರಿಗಳು, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿರುವ ವಿಶೇಷ ಟಾಸ್ಕ್ ಫೋರ್ಸ್ ಸಮಿತಿಯು ನಿಯಮಿತವಾಗಿ ಸಭೆ ಕರೆದು ತ್ಯಾಜ್ಯ ನಿರ್ವಹಣೆ ಕುರಿತು ಪರಿಶೀಲನೆ ನಡೆಸಬೇಕು ಹಾಗೂ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳ ಬಗ್ಗೆ ಐಇಸಿ ಚಟುವಟಿಕೆಗಳನ್ನು ಹೆಚ್ಚಿಸಬೇಕು. ಹಸಿ ಕಸ, ಒಣಕಸ ಮತ್ತು ಹಾನಿಕಾರಕ ಕಸಗಳನ್ನು ಮನೆಗಳಲ್ಲೇ ಪ್ರತ್ಯೇಕಗೊಳಿಸಿ ಸಂಗ್ರಹಿಸಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಹಾನಿಕಾರಕ ತ್ಯಾಜ್ಯಗಳಾದ ಸ್ಯಾನಿಟರಿ ನ್ಯಾಪ್ಕಿನ್, ಡೈಪರ್‌, ಔಷಧೀಯ ತ್ಯಾಜ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಅವಶ್ಯಕತೆ ಇರುವೆಡೆ ಸ್ಯಾನಿಟರಿ ನ್ಯಾಪಿRನ್‌ ನಾಶ ಮಾಡುವ (800 ಡಿಗ್ರಿ ಶಾಖದಲ್ಲಿ ಸುಡುವ) ಇನ್‌ಸ್ಯಾನಿಟೈಸರ್ಸ್‌ ಅಳವಡಿಸಬೇಕು. ಕಟ್ಟಡ ನಿರ್ಮಾಣದ ತ್ಯಾಜ್ಯ ನಿರ್ವಹಣೆ ಕುರಿತು ಸಹ ಕಠಿಣ ಕ್ರಮ ಕೈಗೊಳ್ಳಬೇಕು. ಕಲ್ಯಾಣಮಂಟಪಗಳು, ಇತರೆ ದೊಡ್ಡ ಕಾರ್ಯಕ್ರಮ ನಡೆಸುವವರು ತಾವು ಉತ್ಪಾದಿಸುವ ಕಸವನ್ನು ತಾವೇ ಸಮರ್ಪಕವಾಗಿ ನಿರ್ವಹಿಸಬೇಕು. ಕಸ ವಿಂಗಡಣೆ ಮಾಡದ ಸಾರ್ವಜನಿಕರು ಹಾಗೂ ಸಂಸ್ಥೆಗಳ ವಿರುದ್ದ ಸೂಕ್ತ ದಂಡ ಮತ್ತು ಕ್ರಮವನ್ನು ಸ್ಥಳೀಯ ಸಂಸ್ಥೆಗಳು
ವಹಿಸಬೇಕು ಎಂದು ತಿಳಿಸಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ಹಸಿ ಕಸ ಮತ್ತು ಒಣ ಕಸವನ್ನು ಪ್ರತಿ ಮನೆ ಮನೆಯಿಂದ ಸಂಗ್ರಹಿಸಲಾಗುತ್ತಿದೆ. ಹಾನಿಕಾರಕ ಕಸದ ಕುರಿತು ಜನರಲ್ಲಿ ಅರಿವು ಮೂಡಿಸಲಾಗಿದೆ. ಕಸ ವಿಂಗಡಣೆ ಮಾಡದವರಿಗೆ ದಂಡ ಸಹ ವಿಧಿಸಲಾಗುತ್ತಿದೆ ಎಂದರು.

Advertisement

ಜಿಪಂ ಸಿಇಒ ಡಾ| ವಿಜಯಮಹಾಂತೇಶ ದಾನಮ್ಮನವರ್‌ ಮಾತನಾಡಿ, ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಮೊದಲನೇ ಹಂತದಲ್ಲಿ ಬಯಲು ಬಹಿರ್ದೆಸೆಮುಕ್ತ ಜಿಲ್ಲೆಯಾಗಿ ಘೋಷಣೆಯಾಗಿದೆ. ಎರಡನೇ ಹಂತದಲ್ಲಿ ಸ್ವಚ್ಛ ಗ್ರಾಮ ಸ್ವಸ್ಥಗ್ರಾಮ ಧ್ಯೇಯವಾಕ್ಯದೊಂದಿಗೆ ಘನ ತ್ಯಾಜ್ಯ ನಿರ್ವಹಣೆ ಘಟಕಗಳನ್ನು ಗ್ರಾಪಂ ಮಟ್ಟದಲ್ಲಿ ಸ್ಥಾಪಿಸಲಾಗುತ್ತಿದೆ. 195 ಗ್ರಾ.ಪಂ ಗಳಲ್ಲಿ ಪ್ರತಿ ಮನೆಗಳಿಗೆ ಕಸ ಸಂಗ್ರಹಿಸುವ ಬುಟ್ಟಿ ನೀಡಲಾಗಿದೆ ಹಾಗೂ ಕಸ ಸಂಗ್ರಹಿಸಲು 131 ವಾಹನಗಳನ್ನು ಖರೀದಿಸಲಾಗಿದೆ. ನರೇಗಾ ಯೋಜನೆಯಡಿ 89 ಗ್ರಾ.ಪಂ ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಪ್ರತಿ ತಿಂಗಳು ಸಮಿತಿ ಸಭೆ ನಡೆಸಿ ವರದಿ ನೀಡಲಾಗುವುದು. ಹಾನಿಕಾರಕ ಕಸ ವಿಂಗಡಣೆ ಕುರಿತು ಅರಿವು ಮೂಡಿಸಿ ಕ್ರಮ ವಹಿಸಲಾಗುವುದು ಎಂದರು. ಎಸ್ಪಿ ಸಿ.ಬಿ. ರಿಷ್ಯಂತ್‌, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಪೌರಾಡಳಿತ ನಿರ್ದೇಶನಾಲಯದ ಘನತ್ಯಾಜ್ಯ ವಿಲೇವಾರಿ ಕಾರ್ಯಪಾಲಕ ಅಭಿಯಂತರರಾದ ಸ್ನೇಹಲತ, ಹಿರಿಯ ಪರಿಸರ ಅಧಿಕಾರಿ ಮುರಳೀಧರ, ಮಾಲಿನ್ಯ ನಿಯಂತ್ರಣ ಮಂಡಳಿ ಅ ಧಿಕಾರಿ ಮಹೇಶ್ವರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಇದ್ದರು.

ದಾವಣಗೆರೆ ನಗರದಲ್ಲಿ ಹೊಸದಾಗಿ ಬಡಾವಣೆ ನಿರ್ಮಾಣವಾದಲ್ಲಿ ಐದು ಲಕ್ಷ ಟನ್‌ಗೂ ಅಧಿಕ ಕಸ ಸಂಗ್ರಹವಾಗುವೆಡೆ ಶೇ. 5ರಷ್ಟು ಭೂಮಿಯನ್ನು ತ್ಯಾಜ್ಯ ನಿರ್ವಹಣೆಗೆ ಮೀಸಲಿಡಬೇಕು. ಜೊತೆಗೆ ರಾಜ್ಯ ಮಾಲಿನ್ಯ ಮಂಡಳಿಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು.
ಸುಭಾಷ್‌ ಬಿ. ಅಡಿ, ರಾಷ್ಟ್ರೀಯ ಹಸಿರು
ನ್ಯಾಯಮಂಡಳಿ ಅಧ್ಯಕ್ಷರು

Advertisement

Udayavani is now on Telegram. Click here to join our channel and stay updated with the latest news.

Next