ಬೆಳಗಾವಿ: ವಿದ್ಯಾರ್ಥಿ ದೆಸೆಯಲ್ಲಿಯೇ ದೈಹಿಕ ಸಧೃಡತೆ ಬೆಳೆಸಿಕೊಳ್ಳಲು ಪಠ್ಯದ ಜೊತೆಗೆ ಕಡ್ಡಾಯವಾಗಿ ಶಾಲಾ-ಕಾಲೇಜಿನ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಸಾಧನೆ ಮಾಡಿ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ಡಾ| ಸಂಜಯ ಪೂಜಾರಿ ಹೇಳಿದರು.
ಜಿಮಖಾನಾ ಚೇರಮನ್ ಪ್ರೊ| ಕಿರಣ ಪೋತದಾರ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳು ಅಂತರ ಕಾಲೇಜು ಹಾಗೂ ವಿಟಿಯು ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಉತ್ತಮ ಸಾಧನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕ್ರೀಡೆ ಮತ್ತು ಶೈಕ್ಷಣಿಕ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪದಕ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಿ ಅಭಿನಂದಿಸಲಾಯಿತು. ಅಥ್ಲೆಟಿಕ್ಸ್‌ನಲ್ಲಿ ಉತ್ತಮ ಸಾಧನೆ ಮಾಡಿದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಗುರುನಾಥ ಕೋಲಾದೂರ, ಮಂಥನ್ ರೇವಣಕರ ವರ್ಷದ ಅತ್ಯುತ್ತಮ ಕ್ರೀಡಾಪಟು ಗೌರವ ಪಡೆದರು. ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಎಂಜನಿಯರಿಂಗ್ ವಿಭಾಗ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿತು.
ಕಾರ್ಯಕ್ರಮದಲ್ಲಿ ಪ್ರೊ| ಅಮರ್ ಬ್ಯಾಕೋಡಿ, ಪ್ರೊ| ಅನಿಲಕುಮಾರ್ ಕೋರಿಶೆಟ್ಟಿ, ಪ್ರೊ| ಸಾಗರ ಬಿರ್ಜೆ, ದೈಹಿಕ ನಿರ್ದೇಶಕ ವಿಶಾಂತ ಧಮೋಣೆ ಉಪಸ್ಥಿತರಿದ್ದರು. ಅತಿಖಾ ಬೇಗ್ ಸ್ವಾಗತಿಸಿ ನಿರೂಪಿಸಿದರು. ದಿವ್ಯಾನಿ ಶೇಲಾರ ವಂದಿಸಿದರು.
Advertisement
ನಗರದ ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದಲ್ಲಿ ಶನಿವಾರ ಜಿಮ್‌ಖಾನಾ ಪಾರಿತೋಷಕ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲಿಸಿದ ಶಿಕ್ಷಕರು, ಕಲಿತ ಕಾಲೇಜು ಮತ್ತು ದೇಶಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತರುವಂತಹ ಸಾಧನೆ ಮಾಡಬೇಕು ಎಂದರು.
Related Articles
Advertisement