Advertisement
ಬಿಬಿಎಂಪಿಯ ಪೌರ ಕಾರ್ಮಿಕರು, ಕೂಲಿ ಕಾರ್ಮಿಕರಿಗೆ ಮಲ್ಲೇಶ್ವರದಲ್ಲಿ ಬುಧವಾರ ಪಡಿತರ ವಿತರಣೆ ಮಾಡಿದ ಡಾ. ಅಶ್ವತ್ಥನಾರಯಣ ಅವರು ಸುದ್ದಿಗಾರರ ಜತೆ ಮಾತನಾಡಿದರು.
Related Articles
Advertisement
“ಮಲ್ಲೇಶ್ವರ ಭಾಗದಲ್ಲಿ ಪ್ರತಿನಿತ್ಯ 12 ಸಾವಿರ ಆಹಾರ ಪೊಟ್ಟಣಗಳನ್ನು ಅಗತ್ಯ ಇರುವವರಿಗೆ ವಿತರಿಸುವ ಕೆಲಸ ಮಾಡಲಾಗುತ್ತಿದೆ. ಆಹಾರ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಗುಣಮಟ್ಟದ ಪರಿಶೀಲನೆ ನಡೆಸಿದ್ದೇನೆ. ಕೂಲಿ ಕಾರ್ಮಿಕರು, ಅಸಹಾಯಕರು, ಹಿರಿಯ ನಾಗರಿಕರ ಮನೆಗೆ ತೆರಳಿ, ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ. ಔಷಧ, ಆಹಾರ ಹಾಗೂ ಇನ್ನಿತರ ಸೌಕರ್ಯಕ್ಕಾಗಿ ಮಲ್ಲೇಶ್ವರ ಕ್ಷೇತ್ರದ ಎಲ್ಲ ವಾರ್ಡ್‌ಗಳ ನಾಗರಿಕರಿಗೆ 3 ಮೊಬೈಲ್ ನಂಬರ್ ಕೊಟ್ಟಿದ್ದೇವೆ. ಜತೆಗೆ, ಎಲ್ಲ ರಸ್ತೆಗಳಲ್ಲಿ ಸೋಂಕು ನಿವಾರಕ ಔಷಧ ಸಿಂಪಡಿಸಲಾಗುತ್ತಿದೆ,”ಎಂದು ಮಾಹಿತಿ ನೀಡಿದರು.
ಪಡಿತರ ವಿತರಣೆ
ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, 2 ಕೆಜಿ ಗೋಧಿ, 1 ಕೆಜಿ ಬೇಳೆ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಬರುವ ಪಡಿತರವನ್ನು 20ನೇ ತಾರೀಕಿನ ನಂತರ ವಿತರಣೆ ಮಾಡಲಾಗುತ್ತದೆ. ಇದಲ್ಲದೇ, ಕಾರ್ಮಿಕ ಇಲಾಖೆಯಿಂದ ಒಂದೂವರೆ ಲಕ್ಷ ಮಂದಿಗೆ ಪಡಿತರ ವಿತರಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ 2 ಲಕ್ಷ ಮಂದಿಗೆ ಪಡಿತರ ವಿತರಿಸಲು ನಿರ್ಧರಿಸಲಾಗಿದೆ. ಜತೆಗೆ ಚುನಾಯಿತ ಪ್ರತಿನಿಧಿಗಳು, ಸಂಘಟನೆಗಳು, ನಾಗರಿಕರು ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಮೂಲಕ ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ”ಎಂದು ಅಭಿನಂದಿಸಿದರು.