Advertisement

ಬಾಲ್ಯವಿವಾಹ ತಡೆಗೆ ಮುನ್ನೆಚ್ಚರಿಕೆ ವಹಿಸಿ

06:32 PM Jun 09, 2022 | Team Udayavani |

ತುಮಕೂರು: ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವೈಯಕ್ತಿಕ ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್‌ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯವಿವಾಹ ತಡೆಗೆ ಶ್ರಮಿಸಬೇಕು ಎಂದು ಹೇಳಿದರು.

ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ: ಅತ್ಯಾಚಾರ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಸಮಾಲೋಚನೆ, ವೈದ್ಯ ಕೀಯ ನೆರವು, ಕಾನೂನು ಸಲಹೆ, ಪೊಲೀಸ್‌ ನೆರ ವನ್ನು ಒದಗಿಸಲಾಗುತ್ತಿದ್ದು, 36.75 ಲಕ್ಷ ಅಂದಾಜು ವೆಚ್ಚದಲ್ಲಿ ಪಿಆರ್‌ಇಡಿ ವತಿಯಿಂದ ನಿರ್ಮಿಸಲಾಗಿ ರುವ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಕಟ್ಟಡದ ಉದ್ಘಾಟನೆ ನೆರವೇರಿಸಬೇಕಿದ್ದು, ಈ ಸಂಬಂಧ ಶೀಘ್ರವಾಗಿ ಕಟ್ಟಡದ ಕಾಮಗಾರಿ ಪೂರ್ಣಗೊಳಿಸುವಂತೆ ಪಿಆರ್‌ ಇಡಿ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

205 ಕಡೆ ಬಾಲ್ಯವಿವಾಹದ ಬಗ್ಗೆ ಅರಿವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾದ ಶ್ರೀಧರ್‌ ಅವರು ಸಭೆಗೆ ತಮ್ಮ ಇಲಾಖಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುತ್ತಾ, ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಸಂಬಂಧ ಅರಿವು ಮೂಡಿಸಲು ವಿಡಿಯೋ ಆನ್‌ ವೀಲ್‌ ಕಾರ್ಯ ಕ್ರಮದ ಮೂಲಕ ಜಿಲ್ಲೆಯಲ್ಲಿ 205 ಕಡೆ ಬಾಲ್ಯ ವಿವಾಹದ ಬಗ್ಗೆ ಅರಿವು ಮೂಡಿಸಲಾಗಿದ್ದು, ಒಟ್ಟು 36,044 ಜನರು ಕಾರ್ಯಕ್ರಮದ ಪ್ರಯೋಜನ ಪಡೆದಿರುತ್ತಾರೆ ಎಂದು ವಿವರಿಸಿದರು.

ತುಮಕೂರು ಜಿಲ್ಲೆಯಲ್ಲಿ 2021-22ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಹಂತಗಳಲ್ಲಿ ಒಟ್ಟು 111 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 100 ಪ್ರಕರಣ ತಡೆಯಲಾಗಿದ್ದು, 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಉಪನಿರ್ದೇಶಕರು ವಿವರಿಸಿದರು.

Advertisement

70 ಪ್ರಕರಣಗಳು ಬಾಕಿ: ಕೌಟುಂಬಿಕ ದೌರ್ಜನ್ಯ ಮಹಿಳೆಯರ ಸಂರಕ್ಷಣಾ ಕಾಯ್ದೆ-2005ರಡಿ ಜನವರಿ 2022ರಿಂದ ಮಾರ್ಚ್‌ 2022ರವರೆಗೆ 55 ಸೇರಿದಂತೆ ಒಟ್ಟು 120 ಪ್ರಕರಣ ದಾಖಲಾಗಿದ್ದು, ಈ ಪೈಕಿ 50 ಪ್ರಕರಣ ಸಮಾಲೋಚನೆ ಮೂಲಕ ಇತ್ಯರ್ಥ ಪಡಿಸಲಾಗಿದ್ದು, ವರ್ಷಾಂತ್ಯದಲ್ಲಿ ಸಂರಕ್ಷಣಾಧಿಕಾರಿ ಹಂತ ದಲ್ಲಿ 34 ಹಾಗೂ ನ್ಯಾಯಾಲಯ ಹಂತದಲ್ಲಿ 36 ಸೇರಿ ಒಟ್ಟು 70 ಪ್ರಕರಣಗಳು ಬಾಕಿ ಇರುತ್ತವೆ ಎಂದು ತಿಳಿಸಿದರು.ಸಭೆಯಲ್ಲಿ ನ್ಯಾಯಮೂರ್ತಿ ರಾಘವೇಂದ್ರ ಶೆಟ್ಟಿಗಾರ್‌, ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

497 ಪ್ರಕರಣ ಇತ್ಯರ್ಥ, 20 ಬಾಕಿ
ಸಾಂತ್ವಾನ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 517 ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿ 497 ಪ್ರಕರಣ ಸಮಾ ಲೋಚನೆ ಮೂಲಕ ಇತ್ಯರ್ಥ, 20 ಪ್ರಕರಣ ಬಾಕಿ ಇರುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆ ಉಪನಿರ್ದೇಶಕರಾದ ಶ್ರೀಧರ್‌ ತಿಳಿಸಿದರು. ಸಖೀ ಒನ್‌ ಸ್ಟಾಪ್‌ ಸೆಂಟರ್‌ ಯೋಜನೆಯಡಿ 2021-22ನೇ ಸಾಲಿನಲ್ಲಿ ಒಟ್ಟು 234 ಪ್ರಕರಣ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಯಡಿ ತುಮಕೂರು ಜಿಲ್ಲೆಯಲ್ಲಿ ಈ ವರ್ಷದ
ಜನವರಿಯಿಂದ ಮಾರ್ಚ್‌ ಅಂತ್ಯದವರೆಗೆ ಒಟ್ಟು 28 ಪ್ರಕರಣ ದಾಖಲಾಗಿರುತ್ತವೆ ಎಂದು ಉಪನಿರ್ದೇಶಕರಾದ ಶ್ರೀಧರ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next