Advertisement

ಮಳೆಹಾನಿ: ಮುನ್ನೆಚ್ಚರಿಕೆ ವಹಿಸಿ ಕಂದಾಯ ಸಚಿವ ಆರ್‌. ಅಶೋಕ್‌ ಸೂಚನೆ

08:51 AM Aug 08, 2020 | mahesh |

ಉಡುಪಿ: ಜಿಲ್ಲೆಯಲ್ಲಿ ಮಳೆಹಾನಿ ಹಾಗೂ ಪ್ರಕೃತಿ ವಿಕೋಪದಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಸಹಿತ ಸಾವು ನೋವುಗಳು ಸಂಭವಿಸದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಅವರು ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮಳೆ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಳೆದ 10 ವರ್ಷಗಳಿಂದ ಅನಾಹುತಗಳು ಸಂಭವಿಸಿರುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದ ಸಚಿವರು ಪ್ರಾಕೃತಿಕ ವಿಕೋಪ ತಡೆಗೆ ಜಿಲ್ಲಾ, ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ರಚಿಸಿ, ನೋಡೆಲ್‌ ಅಧಿಕಾರಿಗಳನ್ನು ನೇಮಿಸುವಂತೆ ಸೂಚಿಸಿದರು.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್‌ ಸುನೀಲ್‌ ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿದರು.

ಎಸ್‌ಡಿಆರ್‌ಎಫ್ ಕೇಂದ್ರಕ್ಕೆ ಮನವಿ
ರಾಜ್ಯ ಸರಕಾರದಿಂದ ನೀಡಲಾಗುವ ಹೊಸ ಎಸ್‌ಡಿಆರ್‌ಎಫ್ ತಂಡವನ್ನು ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಕೃತಗೊಳಿಸಿದರೆ ತುರ್ತು ಸಂದರ್ಭದಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಿಗೆ ಇಲ್ಲಿಂದ ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಅಭಿಪ್ರಾಯಪಟ್ಟರು.

39 ಕೋಟಿ ರೂ. ನಷ್ಟ
ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಮಳೆಯಿಂದಾಗಿ ಸುಮಾರು 39 ಕೋ.ರೂ. ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

Advertisement

ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿ
ಜಿಲ್ಲೆಯಲ್ಲಿ 13 ಕಡೆ ಗುರುತಿಸಲಾದ ಕಡಲ್ಕೊರೆತವನ್ನು ತಡೆಯಲು ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಕಳೆದ ಬಾರಿ ಮನೆ ಹಾನಿಯದವರಿಗೆ ಮನೆ ನಿರ್ಮಿಸಲು 2 ಮತ್ತು 3ನೇ ಹಂತದ ಅನುದಾನ ಶೀಘ್ರ ಬಿಡುಡೆಗೆ ಕ್ರಮ ಕೈಗೊಳ್ಳುವಂತೆ ಜಿ.ಪಂ. ಸಿಇಒಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next