Advertisement

ಸಾಂಕ್ರಾಮಿಕ ರೋಗ ತಡೆಗೆ ಮುಂಜಾಗ್ರತೆ ವಹಿಸಿ

03:44 PM Jun 25, 2022 | Team Udayavani |

ಚಿಕ್ಕಬಳ್ಳಾಪುರ: ನಗರ ಪ್ರದೇಶದ ವ್ಯಾಪ್ತಿಯಲ್ಲಿ ಡೆಂ  ಸೇರಿದಂತೆ ಇತರೆ ಸಾಂಕ್ರಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ (ಬಾಬು) ನಗರಸಭೆ ಸಿಬ್ಬಂದಿಗೆ ಸೂಚಿಸಿದರು.

Advertisement

ನಗರಸಭೆ ಕಾರ್ಯಾಲಯದ ಸರ್‌. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶುಕ್ರವಾರ ನಗರಸಭೆ ವತಿಯಿಂದ ನಗರ ಪ್ರದೇಶದಲ್ಲಿ ಸಾಂಕ್ರಮಿಕ ರೋಗಗಳ ನಿಯಂತ್ರಣ ಕುರಿತು ನಗರಸಭೆ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಡೆದ ಸಭೆಯಲ್ಲಿ ಮಾತನಾಡಿ, ಮಳೆಗಾಲ ಆರಂಭವಾಗಿರುವುದರಿಂದ ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಡೆಂ , ಮಲೇರಿಯಾ, ಚಿಕೂನ್‌ ಗುನ್ಯಾ ಸೇರಿದಂತೆ ಇತರೆ ಸಾಂಕ್ರಮಿಕ ರೋಗಗಳು ಹರಡದಂತೆ ನಿಯಂತ್ರಣಾ ಕ್ರಮಗಳನ್ನು ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕಸ ಎಲ್ಲೆಂದರಲ್ಲಿ ಎಸೆಯಬೇಡಿ: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಸಂಬಂಧಿಸಿ ದಂತೆ ನಗರ ಪ್ರದೇಶದ ಸಾರ್ವಜನಿಕರು ಅನುಸರಿಸ ಬೇಕಾದ ಕ್ರಮಗಳ ಕುರಿತು ಹೆಚ್ಚಿನ ಅರಿವು ಮೂಡಿಸ ಬೇಕು. ನೈರ್ಮಲ್ಯತೆ ಕಾಪಾಡುವಲ್ಲಿ ಜಾಗೃತರಾಗ ಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರು ಸಂಗ್ರಹ ವಾಗುವ ಗುಂಡಿಗಳನ್ನು ಮುಚ್ಚಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯುವುದಕ್ಕೆ ಕಡಿವಾಣ ಹಾಕಬೇಕು. ಖಾಲಿ ನಿವೇಶನಗಳಲ್ಲಿಯೂ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ರೋಗಗಳು ಉಲ್ಪಣವಾಗದಂತೆ ಕ್ರಮ ವಹಿಸಬೇಕು ಎಂದು ನಿರ್ದೇಶಿಸಿದರು.

ನೀರು ನಿಲ್ಲದಂತೆ ಎಚ್ಚರವಹಿಸಿ: ನಗರಸಭೆ ಪೌರಾಯುಕ್ತ ಡಾ.ಮಹಾಂತೇಶ್‌ ಮಾತನಾಡಿ, ಮಳೆಗಾಲ ದಲ್ಲಿ ಸೊಳ್ಳೆಗಳಿಂದ ಹರಡುವ ಸಾಂಕ್ರಮಿಕ ರೋಗ ಗಳ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ವಹಿಸಬೇಕು. ಮನೆಯೊಳಗೆ ಅಥವಾ ಮೇಲ್ಛಾ ವಣಿಯ ನೀರಿನ ತೊಟ್ಟಿಗಳಲ್ಲಿ ವಾರಕ್ಕೊಮ್ಮೆ ನೀರನ್ನು ಖಾಲಿ ಮಾಡಿ ಪುನಃ ಭರ್ತಿ ಮಾಡಿ, ಭದ್ರವಾದ ಮುಚ್ಚಳಿಕೆಯಿಂದ ಮುಚ್ಚುವುದು. ಮನೆಯ ಹೊರಗೆ ಹಾಗೂ ಒಳಗೆ ಯಾವುದೇ ಕಾರಣಕ್ಕೂ ನೀರು ನಿಲ್ಲದಂತೆ ಎಚ್ಚರವಹಿಸುವುದು. ಒಡೆದ ಬಾಟಲಿ, ಟೈರ್‌, ಟಿನ್‌, ತೆಂಗಿನ ಚಿಪ್ಪು ಇತ್ಯಾದಿಗಳಲ್ಲಿ ನೀರು ಸಂಗ್ರಹವಾದಂತೆ ನೋಡಿಕೊಳ್ಳಬೇಕು. ವಾತಾವರಣ ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿ ಕಾರಿಗಳು, ಆರೋಗ್ಯ ನಿರೀಕ್ಷಕರು, ಆಶಾ ಕಾರ್ಯ ಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next