Advertisement

ಕೋವಿಡ್ 19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ

06:02 PM Apr 27, 2020 | Suhan S |

ಗದಗ: ಜಿಲ್ಲೆಯಲ್ಲಿ ಕೋವಿಡ್‌-19 ಸೋಂಕು ನಿಯಂತ್ರಣ ಕುರಿತು ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ಎಂ.ಟಿ. ರೇಜು ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

Advertisement

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಪಂ ಸಿಇಒ ಡಾ| ಆನಂದ್‌ ಕೆ., ಅಪರ ಜಿಲ್ಲಾಧಿಕಾರಿ ಸತೀಶ ಕುಮಾರ್‌ ಎಂ. ಅವರೊಂದಿಗೆ ಕಾರ್ಯದರ್ಶಿಗಳು ಕೋವಿಡ್‌-19 ಪರಿಸ್ಥಿತಿ ಕುರಿತು ಚರ್ಚಿಸಿದರು. ಜಿಲ್ಲೆಯಲ್ಲಿ ಕೋವಿಡ್‌-19 ನಿಯಂತ್ರಣಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರ ಆರೋಗ್ಯದ ಮೇಲೆ ನಿಗಾವಹಿಸುವಂತೆ ಸೂಚನೆ ನೀಡಿದರು.

ಸಾರ್ವಜನಿಕರಿಗೆ ಮನೆ ಬಿಟ್ಟು ಹೊರಗೆ ಬಾರದಂತೆ ನಿರ್ಬಂಧ ಪಾಲಿಸುವುದನ್ನು ಕಡ್ಡಾಯವಾಗಿ ಜಾರಿಗೊಳಿಸಿದರ ಹಿನ್ನೆಲೆಯಲ್ಲಿ ಬಡ ಕಾರ್ಮಿಕರಿಗೆ, ವಲಸೆ ಕಾರ್ಮಿಕರಿಗೆ, ತಮ್ಮ ನಿತ್ಯ ಕೆಲಸ ಮತ್ತು ಕೂಲಿ ಮಾಡಲಾಗದೇ ಅಸಹಾಯ ಪರಿಸ್ಥಿತಿಯಲ್ಲಿರುವ ಕುಟುಂಬಗಳಿಗೆ ಆಹಾರ ಒದಗಿಸುವಿಕೆ, ಪಡಿತರ ವಿತರಣೆ, ಜಿಲ್ಲೆಯ ಗಡಿ ಪ್ರದೇಶದಲ್ಲಿ ನಾಕಾಬಂಧಿ ವಹಿಸಬೇಕು. ಮನೆಗಳಲ್ಲಿ ನಿಗಾ ಇರುವವರು ಯಾವುದೇ ಸಂದರ್ಭದಲ್ಲೂ ಹೊರಬರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಮುಂಗಾರು ಹಂಗಾಮು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಾದ ರಸಗೊಬ್ಬರ, ಬಿತ್ತನೆ ಬೀಜಗಳ ಅಗತ್ಯದ ದಾಸ್ತಾನು ಮಾಡಿಕೊಳ್ಳಲು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ ಬಸರಿಗಿಡದ, ಜಿಮ್ಸ್‌ ನಿರ್ದೇಶಕ ಡಾ| ಪಿ.ಎಸ್‌. ಭೂಸರೆಡ್ಡಿ, ಯೋಜನಾ ನಿರ್ದೇಶಕ ರುದ್ರೇಶ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next