Advertisement

ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮವಹಿಸಿ

06:21 AM Jun 25, 2020 | Lakshmi GovindaRaj |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆರೋಗ್ಯದ ಸುರಕ್ಷತೆ ಹಿನ್ನೆಲೆಯಲ್ಲಿ ಕೋವಿಡ್‌ 19 ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಜಿಲ್ಲೆಯಲ್ಲಿ ಪರೀಕ್ಷೆ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬುಧವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿ  ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಅಗತ್ಯ ಸಿದ್ಧತೆ ಮಾಡಿಕೊಂಡು ಎಲ್ಲಾ ಇಲಾಖೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದರು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಪರೀಕ್ಷೆ  ಎದುರಿಸಲು ಶಿಕ್ಷಕರು, ಪೋಷಕರು ವಿದ್ಯಾರ್ಥಿಳಿಗೆ ಆತ್ಮಸ್ಥೈರ್ಯ ತುಂಬಬೇಕು.

ಕೋವಿಡ್‌ -19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು, ಎಸ್ಸೆಸ್ಸೆಲ್ಸಿ  ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.ವಿದ್ಯಾರ್ಥಿಗಳು ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಮೂಲಕ ಕೋವಿಡ್‌ 19 ನಿಗ್ರಹಕ್ಕೆ  ಕೈಜೋಡಿಸಬೇಕೆಂದು ಹೇಳಿದರು.

ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್‌, ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಯೋಗೇಶ್‌ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ  ಉಪನಿರ್ದೇಶಕ ಎಸ್‌.ನಾಗೇಶ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next