ಮಂಗಳೂರು : ಇಲ್ಲಿನ ತಲಪಾಡಿ ಹೆದ್ದಾರಿಯಲ್ಲಿರುವ ಟೋಲ್ ಗೇಟ್‌ನಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ಟೋಲ್ ಸಂಗ್ರಹಕ್ಕೆ ಮುಂದಾಗಿರುವ ಹಿನ್ನಲೆಯಲ್ಲಿ ಬುಧವಾರ ಬೆಳಗ್ಗೆ ವಿವಿಧ ಸಂಘಟನೆಗಳ ಕಾರ್ಯಕರ್ತರು ,ಸ್ಥಳೀಯರು ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೆಳಗ್ಗೆ 8 ಗಂಟೆಯಿಂದ ಟೋಲ್ ಪಡೆಯಲಾಗುತ್ತಿದೆ ಎಂದು ವದಂತಿ ಹಬ್ಬಿದೊಡನೆಯೆ ನೂರಾರು ಸ್ಥಳೀಯರು ಗೇಟ್ ಬಳಿ ಜಮಾವಣೆ ಗೊಂಡಿದ್ದರು. ಪ್ರತಿಭಟನೆ ಹಿನ್ನಲೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು. ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಗೊಂಡಿದ್ದಾರೆ. ನಾಳೆಯೂ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪ್ರತಿಭಟನಾ ನಿರತರು ಹೇಳಿದ್ದಾರೆ.
ಇನ್ನೊಂದೆಡೆ ಪಡುಬಿದ್ರಿಯ ಹೆಜಮಾಡಿಯಲ್ಲಿ ಟೋಲ್ ಸಂಗ್ರಹಿಸಲು ಪ್ರಾರಂಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.