Advertisement

ತಲಪಾಡಿ : ಸಂಭ್ರಮದ ಮೊಸರು ಕುಡಿಕೆ ಉತ್ಸವ

08:35 AM Aug 20, 2017 | Team Udayavani |

ತಲಪಾಡಿ: ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಆಧ್ಯಾತ್ಮಿಕ ಜೀವನಕ್ಕೂ ಮಹತ್ವವನ್ನು ನೀಡಿ, ಸಂಸ್ಕಾರಯುತ ಜೀವನವನ್ನು ತಮ್ಮ ದಾಗಿಸಿಕೊಳ್ಳಬೇಕು ಎಂದು ಪ್ರೊ| ಎಂ.ಬಿ. ಪುರಾಣಿಕ್‌ ಅಭಿಪ್ರಾಯಪಟ್ಟರು.

Advertisement

ಅವರು ಇಲ್ಲಿನ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಆಯೋಜಿಸಲಾದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷತೆ ವಹಿಸಿ ಮಕ್ಕಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿ ಸೀತಾರಾಮ್‌ ಭಟ್‌ ಮಾತನಾಡಿ, ವಿದ್ಯಾರ್ಥಿ ಗಳು ಸಕಾರಾತ್ಮಕ ಮನೋಭಾವನೆಯನ್ನು ಬೆಳೆಸಿಕೊಳ್ಳ ಬೇಕೆಂದು ಹೇಳಿದರು. ಅವರು ಮಡಕೆ ಒಡೆಯುವ ಮೂಲಕ ವಿಟ್ಲ ಪಿಂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿದ್ಯಾರ್ಥಿನಿಯರಿಂದ ನಾಸಿಕ್‌ ಬ್ಯಾಂಡ್‌ ಮತ್ತು ವಿದ್ಯಾರ್ಥಿ ಗಳಿಂದ ಹುಲಿವೇಷ ಕುಣಿತವು ಮೆರವಣಿಗೆಗೆ ಶೋಭೆ ನೀಡಿತು. ಕೃಷ್ಣ ಮತ್ತು ರಾಧೆಯ ವೇಷ ಧರಿಸಿದ ಚಿಣ್ಣರು ಮೆರವಣಿಗೆಯಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳಿಂದ ಕೃಷ್ಣನ ಜೀವನದ ಕುರಿತಾದ ಭಾಷಣ, ಕೃಷ್ಣನ ಜನ್ಮವೃತ್ತಾಂತವನ್ನು ತಿಳಿಸುವ ನೃತ್ಯ ಮತ್ತು ಕೃಷ್ಣನ ಪೂಜೆ ಮತ್ತು ಭಜನ ಕಾರ್ಯಕ್ರಮಗಳು ನಡೆದವು.

ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮಗೆ ನಿಯೋಜಿಸಿದ್ದ ಅಟ್ಟಣಿಗೆಯಲ್ಲಿ ಮಾನವ ಪಿರಮಿಡ್‌ಗಳನ್ನು ರಚಿಸಿ ಜೋಡಿಸಲ್ಪಟ್ಟ ಮಡಕೆಗಳನ್ನು ಒಡೆದು ಸಂಭ್ರಮೋಲ್ಲಾಸದಿಂದ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸುನಂದಾ ಪುರಾಣಿಕ್‌ ಉಪಸ್ಥಿತರಿದ್ದರು. ವಿದ್ಯಾರ್ಥಿ ವಿN°àಶ್‌ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಶಿವಪ್ರಸಾದ್‌ ಭಟ್‌ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಜಲಿ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next