Advertisement
ಅಂದಹಾಗೆ ಲೋಕಸಭೆಯಲ್ಲಿ ಎರಡನೇ ಬಾರಿಗೆ ಮಸೂದೆಅಂಗೀಕಾರವಾಗುತ್ತಿದೆ. ಮೂರು ಬಾರಿ ತಲಾಖ್ ಹೇಳುವ ವ್ಯಕ್ತಿಗೆ ಜೈಲು ಶಿಕ್ಷೆ ನೀಡುವ ಪ್ರಸ್ತಾಪವನ್ನು ತೆಗೆದು ಹಾಕಬೇಕು ಎಂಬ ತಿದ್ದುಪಡಿಯನ್ನು ಲೋಕಸಭೆ ತಿರಸ್ಕರಿಸಿದೆ. ಇದಲ್ಲದೆ, ನಿಗದಿತ ಸಮುದಾಯದ ಮಹಿಳೆಯರನ್ನು ಗುರಿಯಾಗಿಸುವ ನಿಟ್ಟಿನಲ್ಲಿಯೇ ಈ ಮಸೂದೆ ಇದೆ ಎಂಬ ವಿಪಕ್ಷಗಳ ಆರೋಪವನ್ನು ಕೇಂದ್ರ ಸರಕಾರ ಸರಾಸಗಟಾಗಿ ತಿರಸ್ಕರಿಸಿದೆ. ಮಸೂದೆಯನ್ನು ಸಂಸತ್‌ನ ಆಯ್ಕೆ ಸಮಿತಿಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ಮತ್ತು ಎಐ ಎಡಿಎಂಕೆ ಒತ್ತಾಯಿಸಿದರೂ, ಸರಕಾರ ಒಪ್ಪದೇ ಇದ್ದ ಹಿನ್ನೆಲೆಯಲ್ಲಿ ಆ 2 ಪಕ್ಷಗಳು ಸದನದಿಂದ ಹೊರ ನಡೆದವು. ಅವುಗಳಿಗೆ ಬೆಂಬಲ ನೀಡಿದ ಟಿಎಂಸಿ, ಆರ್‌ಜೆಡಿ ಸಂಸದರೂ ಕೂಡ ಸಭಾ ತ್ಯಾಗ ಮಾಡಿದ್ದಾರೆ. ಬರೋಬ್ಬರಿ 4 ಗಂಟೆಗಳ ಕಾಲ ಬಿರುಸಿನಡಿ ಚರ್ಚೆ ನಡೆಯಿತು.
Related Articles
Advertisement
ಎಐಎಡಿಎಂಕೆಯ ಪಿ.ವೇಣುಗೋಪಾಲ್, ತೃಣಮೂಲ ಕಾಂಗ್ರೆಸ್‌ನ ಸುದೀಪ್ ಬಂದೋಪಾಧ್ಯಾಯ, ಎಐಎಂಐಎಂನ ಅಸಾದುದ್ದೀನ್ ಒವೈಸಿ, ಎನ್‌ಸಿಪಿಯ ಸುಪ್ರಿಯ ಸುಳೆ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ವೇಳೆ ವಿಧೇಯಕವನ್ನು ಆಯ್ಕೆ ಸಮಿತಿಗೆ ಒಪ್ಪಿಸಲೇಬೇಕು ಎಂದು ಒತ್ತಾಯಿಸಿದರು.
ಮಿಶ್ರ ಪ್ರತಿಕ್ರಿಯೆ ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ಬಗ್ಗೆ ಮುಸ್ಲಿಂ ಸಮುದಾಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಕೆಲವು ಮುಖಂಡರು ಈ ನಿರ್ಧಾರ ಸ್ವಾಗ ತಾರ್ಹ ಎಂದರೆ, ಇತರರು ಅತ್ಯಂತ ಅಪಾಯಕಾರಿ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯ ಕಾರ್ಯದರ್ಶಿ ಎಸ್.ಕ್ಯೂ.ಆರ್.ಇಲ್ಯಾಸ್ ಮಾತನಾಡಿ ಮುಂದಿನ ಲೋಕ ಸಭೆ ಚುನಾವಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳ ಲಾಗಿದೆ ಎಂದಿದ್ದಾರೆ. ಜತೆಗೆ ಇದೊಂದು ಅಪಾಯಕಾರಿ ಎಂದಿದ್ದಾರೆ. ಭಾರತೀಯ ಮುಸ್ಲಿಂ ಮಹಿಳಾ ಆಂದೋ ಲನದ ನಾಯಕಿ ಝಕಿಯ ಸೋಮನ್ ಇದೊಂದು ಸ್ವಾಗತಾರ್ಹ ನಿರ್ಧಾರ ಎಂದಿದ್ದಾರೆ. ರಾಜ್ಯಸಭೆಯಲ್ಲಿ ಪರೀಕ್ಷೆ
ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆ ಪಡೆಯಬೇಕು. ಅಲ್ಲಿ ಕೇಂದ್ರ ಸರಕಾರಕ್ಕೆ ಬಹುಮತ ಇಲ್ಲ. ಜ.5ರಂದು ಚಳಿ ಗಾಲದ ಅಧಿವೇಶನ ಮುಕ್ತಾಯವಾಗುವುದರ ಒಳಗಾಗಿ ಅನುಮೋದನೆ ಪಡೆಯಬೇಕಾಗಿದೆ. ಪ್ರತಿಪಕ್ಷಗಳೆಲ್ಲವೂ ಸರಕಾರದ ಕ್ರಮದ ವಿರುದ್ಧ ಒಂದಾಗಿರುವ ಹಿನ್ನೆಲೆಯಲ್ಲಿ ಮುಂದಿನ ನಡೆ ಕುತೂಹಲಕ್ಕೆ ಕಾರಣವಾಗಿದೆ. ಮಸೂದೆ ಅಂಗೀಕರಿಸಿದ್ದು ನಿಜಕ್ಕೂ ಐತಿಹಾಸಿಕ. ಅದರಿಂದ ಮುಸ್ಲಿಂ ಮಹಿಳೆಯರಿಗೆ ಸಮಾನತೆ ಮತ್ತು ಗೌರವ ನೀಡಿದಂತಾಗಿದೆ. ಅದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಅಮಿತ್ ಶಾ, ಬಿಜೆಪಿ ಅಧ್ಯಕ್ಷ ತಲಾಖ್ ನಿಷೇಧಿಸುವ ನಿಟ್ಟಿನಲ್ಲಿ ಮಸೂದೆ ಮಂಡಿಸಿದ ಕೇಂದ್ರ ಸರಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆಯೂ ಮಸೂದೆಮಂಡಿಸಿ ಅಂಗೀಕರಿಸಲಿ.
ಅರವಿಂದ ಸಾವಂತ್, ಶಿವಸೇನೆ ಸಂಸದ