Advertisement

ಕಲಾಮಂದಿರದಲ್ಲಿ ಉಪ್ಪಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

06:41 PM Jan 03, 2022 | Team Udayavani |

ಪಿರಿಯಾಪಟ್ಟಣ: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮಾಜದ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಾಲ್ಲೂಕು ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಪಿ.ಎಲ್.ರಾಮಣ್ಣ ತಿಳಿಸಿದರು.

Advertisement

ಪಟ್ಟಣದ ಶ್ರೀ ಉಪ್ಪಾರ ರಾಮ ಮಂದಿರದಲ್ಲಿ ಸೋಮವಾರ ಕಾರ್ಯಕ್ರಮದ ಪೂರ್ವಭಾವಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯೂ ಸಂಘದ ವತಿಯಿಂದ ಜ.09ರ ಭಾನುವಾರದಂದು ಮೈಸೂರಿನ ಕಲಾಮಂದಿರದಲ್ಲಿ ಬೆಳಿಗ್ಗೆ 10:30ಕ್ಕೆ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಮಾಜದ ಕುಲ ಗುರುಗಳಾದ ಜಗದ್ಗುರು ಶ್ರೀಶ್ರೀಶ್ರೀ ಪುರುಷೋತ್ತಮನಂದ ಪುರಿ ಮಹಾಸ್ವಾಮಿಗಳು ವಹಿಸಲಿದ್ದು, ಕೇಂದ್ರ ಸರ್ಕಾರದ ಪಂಚಾಯಿತ್ ರಾಜ್ ಇಲಾಖಾ ಸಚಿವರಾದ ಶ್ರೀ ಕಪಿಲ್ ಮೊರೇಶ್ವರ ಪಾಟೀಲ್ ಕಾರ್ಯಕ್ರಮದ  ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.  ಲೋಕಸಭಾ ಸದಸ್ಯ ಪ್ರತಾಪ್ ಸಿಂಹರವರು ಭಗೀರಥ ಮಹರ್ಷಿಯ ಭಾವಚಿತ್ರ ಅನಾವರಣ ಮಾಡಲಿದ್ದು,  ರಾಷ್ಟ್ರೀಯ ಉಪ್ಪು ತಯಾರಕರ ಹಾಗೂ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನೋನಿಯಾ  ಶ್ರೀ ಕೃಷ್ಣಕುಮಾರ್ ಭಾರತಿಯವರು ಪ್ರಧಾನ ಭಾಷಣ ಮಾಡಲಿದ್ದು, ಸಂಘದ ಅಧ್ಯಕ್ಷರಾದ ಪಿಲ್ಮ್ ಮಹದೇವಶೆಟ್ಟರು ಅಧ್ಯಕ್ಷತೆ ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥನ ಭಾವಚಿತ್ರ ಅನಾವರಣ, ಮಾಜಿ ಸಚಿವ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಉಪ್ಪಾರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಗಿರೀಶ್ ಉಪ್ಪಾರ್ ರವರು ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಗಲಿದ ಸಮಾಜದ ಗಣ್ಯರಿಗೆ ನುಡಿನಮನ, ಭಗೀರಥ ಸಮಾಜ ಸೇವಾ ರತ್ನ ಪ್ರಶಸ್ತಿ, ಭಗೀರಥ ಜನ ಸೇವಾ ರತ್ನ ಪ್ರಶಸ್ತಿ, ಭಗೀರಥ ವಿದ್ಯಾಶ್ರೀ ಪ್ರಶಸ್ತಿ, ಭಗೀರಥ ಸುವರ್ಣ ವಿದ್ಯಾಶ್ರೀ, ಭಗೀರಥ ವೈದ್ಯಶ್ರೀ ಪ್ರಶಸ್ತಿ, ಭಗೀರಥ ಶಿಕ್ಷಣ ರತ್ನ ಪ್ರಶಸ್ತಿ, ಭಗೀರಥ ನಾಗರಿಕ ಸೇವಾ ರತ್ನ, ಭಗೀರಥ ಕ್ರೀಡಾ ರತ್ನ ಪ್ರಶಸ್ತಿ, ಭಗೀರಥ ಜಾನಪದ ರತ್ನ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವುದು ಆದ್ದರಿಂದ ಪಿರಿಯಾಪಟ್ಟಣ ತಾಲ್ಲೂಕಿನ ಸಮಾಜದ ಬಂದುಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಹರೀಶ್, ಎನ್.ಜಿ.ಒ ಉಪಾಧ್ಯಕ್ಷ ಶಿವು, ಪಿಡಿಒ ಮಂಜುನಾಥ್, ಸಹಕಾರ ಸಂಘದ ಕಾರ್ಯದರ್ಶಿ ನಟರಾಜ್, ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಪಿ.ಜೆ.ರವಿ, ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಮಂಜು,  ಶಿಕ್ಷಕರಾದ ಬಸವರಾಜು, ಮುಖಂಡರಾದ ಕಿರನಲ್ಲಿ ಸೋಮಶೇಖರ್, ಲೋಕೇಶ್, ಮಾಕೋಡು ಬಸವರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next