Advertisement

ತಾಲಿಬಾನ್ ಆಡಳಿತದ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಕಾಬೂಲ್ ನಲ್ಲಿ ಇಂಟರ್ನೆಟ್ ಸ್ಥಗಿತ

12:47 PM Sep 09, 2021 | Team Udayavani |

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಯನ್ನು ತಾಲಿಬಾನ್ ಸ್ಥಗಿತಗೊಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಮೆಂಟರ್ ಓಕೆ, ಆದರೆ ಶಾಸ್ತ್ರಿ ಜೊತೆ ಧೋನಿ ಜಗಳವಾಡದಿದ್ದರೆ ಸಾಕು: ಗಾವಸ್ಕರ್

ಕಾಬೂಲ್ ಪ್ರದೇಶದಲ್ಲಿ ಪ್ರತಿಭಟನೆಗೆ ಜನರು ಬೆಂಬಲ ನೀಡದಂತೆ ತಡೆಯುವ ನಿಟ್ಟಿನಲ್ಲಿ ತಾಲಿಬಾನ್ ಉಗ್ರರು ಅಂತರ್ಜಾಲ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟನೆಗೆ ಹೆಚ್ಚಿನ ಬೆಂಬಲ ದೊರೆತು, ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂಬ ತಾಲಿಬಾನ್ ಗುಪ್ತಚರ ಇಲಾಖೆ ಆತಂಕ ವ್ಯಕ್ತಪಡಿಸಿದ್ದು, ಇದಕ್ಕಾಗಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲು ಮುಂದಾಗಿರುವುದಾಗಿ ವರದಿ ಹೇಳಿದೆ.

ಕೆಲವು ದಿನಗಳ ಹಿಂದಷ್ಟೇ ತಾಲಿಬಾನ್ ಆಡಳಿತದ ವಿರುದ್ಧ ಮಹಿಳೆಯರು ಸೇರಿದಂತೆ ನೂರಾರು ಮಂದಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದ್ದರು. ಪ್ರತಿಭಟನೆ ತೀವ್ರಗೊಳ್ಳುತ್ತಿರುವ ನಡುವೆ ತಾಲಿಬಾನ್ ಪ್ರತಿಭಟನಾಕಾರರಿಗೆ ಷರತ್ತನ್ನು ವಿಧಿಸಿರುವುದಾಗಿ ವರದಿ ತಿಳಿಸಿದೆ.

Advertisement

ಪ್ರತಿಭಟನಾಕಾರರು ಪ್ರತಿಭಟನೆ ನಡೆಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ ಎಂದು ತಾಲಿಬಾನ್ ಆಂತರಿಕ ಸಚಿವಾಲಯ ಹೇಳಿದೆ. ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನದ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಬಳಿಕ ದೇಶದಲ್ಲಿ ಸರ್ಕಾರವನ್ನು ರಚಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next