Advertisement

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತದ ವಿರುದ್ಧ ಮಹಿಳೆಯರ ಆಕ್ರೋಶ, ಪ್ರತಿಭಟನೆ

03:13 PM Aug 13, 2022 | Team Udayavani |

ಕಾಬೂಲ್: ತಾಲಿಬಾನ್ ಬಂಡುಕೋರರು ಅಫ್ಘಾನಿಸ್ತಾನದ ಅಧಿಕಾರವನ್ನು ಕೈವಶ ಮಾಡಿಕೊಂಡು ಆಗಸ್ಟ್ 15ಕ್ಕೆ ಒಂದು ವರ್ಷ ಪೂರೈಸಲಿದ್ದು, ಏತನ್ಮಧ್ಯೆ ತಾಲಿಬಾನ್ ಆಡಳಿತದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರನ್ನು ಥಳಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿರುವ ಘಟನೆ ಶನಿವಾರ (ಆಗಸ್ಟ್ 13) ನಡೆದಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಮೋದಿ ನಾಯಕತ್ವದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಪ್ರತಿಷ್ಠಿತ ಸ್ಥಾನಮಾನ: ಜೈಶಂಕರ್

ಕಳೆದ ವರ್ಷ ಆಗಸ್ಟ್ 15ರಂದು ತಾಲಿಬಾನ್ ಅಫ್ಘಾನಿಸ್ತಾನದ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಸುಮಾರು ಎರಡು ದಶಕಗಳ ನಂತರ ಅಫ್ಘಾನಿಸ್ತಾನದಲ್ಲಿ ಅಮೆರಿಕ ಮತ್ತು ಮೈತ್ರಿ ಕೂಟದ ಸೇನಾಪಡೆಯನ್ನು ಹಿಂಪಡೆದ ನಂತರ ತಾಲಿಬಾನ್ ಮತ್ತೆ ಅಧಿಕಾರವನ್ನು ತನ್ನ ವಶಕ್ಕೆ ತೆಗೆದುಕೊಂಡಿತ್ತು.

ಕಾಬೂಲ್ ನ ಶಿಕ್ಷಣ ಸಚಿವಾಲಯದ ಕಟ್ಟಡದ ಹೊರಭಾಗದಲ್ಲಿ ಸುಮಾರು 40 ಮಹಿಳಾ ಪ್ರತಿಭಟನಾಕಾರರು, ನಮಗೆ ಬ್ರೆಡ್, ಉದ್ಯೋಗ ಮತ್ತು ಸ್ವಾತಂತ್ರ್ಯ ಕೊಡಿ ಎಂದು ಘೋಷಣೆ ಕೂಗುತ್ತಿದ್ದರು. ಈ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಚದುರಿಸಲಾಯಿತು ಎಂದು ವರದಿ ವಿವರಿಸಿದೆ.

ಕೆಲವು ಮಹಿಳಾ ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ರೈಫಲ್ ಹಿಂಭಾಗದಿಂದ ಥಳಿಸಿರುವುದಾಗಿ ವರದಿ ತಿಳಿಸಿದೆ. ಆಗಸ್ಟ್ 15 ಬ್ಲ್ಯಾಕ್ ಡೇ ಎಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು ಎಂದು ವರದಿ ಹೇಳಿದೆ.

Advertisement

1996ರಿಂದ 2001ರವರೆಗೆ ತಾಲಿಬಾನ್ ಕಠಿಣ ನಿಯಮ ಮತ್ತು ನಿರ್ಬಂಧಗಳ ಮೂಲಕ ಆಡಳಿತ ನಡೆಸಿತ್ತು. ಆದರೆ ಎರಡನೇ ಬಾರಿ ಕಠಿಣ ಇಸ್ಲಾಮಿಕ್ ಕಾನೂನನ್ನು ಹೇರದೆ ಆಡಳಿತ ನಡೆಸುವುದಾಗಿ ತಾಲಿಬಾನ್ ಭರವಸೆ ನೀಡಿತ್ತು. ಆದರೆ ಈಗಾಗಲೇ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹಲವು ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next