Advertisement

ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಆಗ್ರಹ

05:23 PM Jun 25, 2020 | Naveen |

ತಾಳಿಕೋಟೆ: ತಾಲೂಕು ವ್ಯಾಪ್ತಿ ಅಕ್ರಮ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಇದರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್‌ ಮೂಲಕ ಡಿಸಿಗೆ ಮನವಿ ಸಲ್ಲಿಸಿದರು.

Advertisement

ಈ ಅಕ್ರಮ ಮರಳು ಸಾಗಾಣಿಕೆಗೆ ಸಂಬಂಧಪಟ್ಟಂತೆ ಪೊಲೀಸ್‌ ಮತ್ತು ಲೋಕೋಪಯೋಗಿ ಇಲಾಖೆ ಮತ್ತು ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಕಣ್ಣಿಗೆ ಕಂಡರೂ ಕಾಣದಂತೆ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಸೂರಪುರ ತಾಲೂಕಿನ ಕಡೆಯಿಂದ ನಿತ್ಯ ನೂರಾರು ಟಿಪ್ಪರ್‌ಗಳು ರಾಜಾರೋಷವಾಗಿ ಹಗಲು ಹೊತ್ತಿನಲ್ಲಿ ಟನ್‌ಗಟ್ಟಲೇ ಮರಳು ತುಂಬಿಕೊಂಡು ಹೋಗುವುದು ಸಾಮಾನ್ಯವಾಗಿದೆ. ಕೂಡಲೇ ಜಿಲ್ಲಾಧಿಕಾರಿಗಳು ಅಕ್ರಮ ಮರಳು ಸಾಗಾಣಿಕೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ನಂತರ ತಾಲೂಕು ತಹಶೀಲ್ದಾರ್‌ ಅನಿಲಕುಮಾರ ಢವಳಗಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಯ ಜಿಲ್ಲಾಧ್ಯಕ್ಷ ಬಸಲಿಂಗಪ್ಪಗೌಡ ಇಂಗಳಗಿ, ತಾಲೂಕಾಧ್ಯಕ್ಷ ಬಸವರಾಜ ಶಿಂಗನಳ್ಳಿ, ಪರಶುರಾಮ ಘಂಜಾಲ, ನಿಂಗನಗೌಡ ಬಿರಾದಾರ, ಶಿವರಾಜ ನಾಗೂರ, ಶಿವರಡ್ಡಿ ಐನಾಪೂರ, ನಿಂಗರಡ್ಡೆಪ್ಪ ಐನಾಪೂರ, ಬಾಪುಗೌಡ ಪಾಟೀಲ, ಸಿದ್ರಾಮ ಬಳಬಟ್ಟಿ, ಪ್ರಭು ಹಡಪದ, ಶಂಕ್ರಯ್ಯ ನಂದಿಮಠ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next