Advertisement

ಖರ್ಗೆ ರಾಜೀನಾಮೆ ಹೇಳಿಕೆ ಕುರಿತು ಚರ್ಚೆ 

06:00 AM Sep 22, 2018 | Team Udayavani |

ಬೆಂಗಳೂರು: ಎಸ್ಸಿ/ಎಸ್ಟಿ ನೌಕರರ ಮುಂಬಡ್ತಿ ಹಿತ ಕಾಯಲು ರಾಜ್ಯ ಸರ್ಕಾರ ತಂದಿರುವ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಸಂಪುಟ ಸಭೆಯಲ್ಲಿ ಹೇಳಿರುವ ಬಗ್ಗೆ ಶುಕ್ರವಾರ ನಡೆದ ಮೈತ್ರಿ ಪಕ್ಷದ ನಾಯಕರ ಸಭೆಯಲ್ಲಿ ಗಂಭೀರ
ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.

Advertisement

ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿಕೆ ಸಮ್ಮಿಶ್ರ ಸರ್ಕಾರದ ಮೇಲೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ. ಈ ಕುರಿತು ಅವರೊಂದಿಗೆ ಮಾತನಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪ್ರಿಯಾಂಕ್‌ ಖರ್ಗೆಯೊಂದಿಗೆ ಮಾತುಕತೆ ನಡೆಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾ
ಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆಗೂ ಮಾತುಕತೆ ನಡೆಸುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next