Advertisement
ಸುದ್ದಿಗಾರರ ಜತೆ ಮಾತನಾಡಿ, ಯಡಿಯೂರಪ್ಪ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಮೊದಲು ಬಿಡಲಿ. ಬಿಎಸ್ವೈ ಕೊಡುಗೆಯನ್ನು ನೆನಪು ಮಾಡಿಕೊಳ್ಳಲಿ. ಮನಬಂದಂತೆ ಮಾತನಾಡಿದರೆ ಸೂಕ್ತ ಸಂದರ್ಭದಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದರು.
ದಾವಣಗೆರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಇನ್ನು ಮುಂದೆ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರೆ ಪೊರಕೆ ಸೇವೆ ಮಾಡುವುದಕ್ಕೆ ಹೆಣ್ಣು ಮಕ್ಕಳು ಸಜ್ಜಾಗಿದ್ದಾರೆ ಎಂದು ಚನ್ನಗಿರಿ ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ ಎಚ್ಚರಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಯಡಿಯೂರಪ್ಪ ಬಗ್ಗೆ ಮಾತನಾಡಲು ಯತ್ನಾಳ್ಗೆ ನೈತಿಕತೆಯೇ ಇಲ್ಲ. ಅವರು ಹಾಗೆಯೇ ಮಾತನಾಡುತ್ತಿದ್ದರೆ ಪೊರಕೆ ಸೇವೆ, ಒನಕೆ ಸೇವೆ ಮಾಡುವುದಕ್ಕೂ ಮಹಿಳೆಯರು ಸಿದ್ಧವಾಗಿದ್ದಾರೆ. ಯಡಿಯೂರಪ್ಪ ಮನೆಯಲ್ಲಿ ತಿಂದು ಅವರ ಮನೆಯ ಗಳ ಎಣಿಸುತ್ತಿದ್ದಾರೆ ಎಂದರು.