Advertisement

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

11:04 PM Sep 16, 2024 | Esha Prasanna |

ಶಿವಮೊಗ್ಗ: ʼರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರನನ್ನು ನಾನು ಎಂದೂ ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಅಸಮಾಧಾನ ಹೊರಹಾಕಿದ್ದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯಾರು ಏನೇ ಹೇಳಿದರೂ ಕಾರ್ಯಕರ್ತರು ನನ್ನನ್ನು ಒಪ್ಪಿದ್ದಾರೆ. ನಾನು ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯ ನಿರ್ವಹಿಸುತ್ತಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

Advertisement

ನನ್ನನ್ನು ನಾನು ಯಾವತ್ತೂ ನಾಯಕ ಎಂದು ಗುರುತಿಸಿಕೊಳ್ಳುವ ಪ್ರಯತ್ನ ಮಾಡುತ್ತಿಲ್ಲ. ಯಾರು ಒಪ್ಪಿಕೊಳ್ಳಲಿ ಬಿಡಲಿ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಹಿರಿಯರು ಕೊಟ್ಟ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸುತ್ತಿದ್ದೇನೆ. ಯಾರು ಏನೇ ಮಾತನಾಡಿದರೂ ನನ್ನ ಜವಾಬ್ದಾರಿ ನಿರ್ವಹಿಸುವ ಜೊತೆಗೆ ನಾನೇ ರಾಜ್ಯಾಧ್ಯಕ್ಷ ಎಂಬುದಂತೂ ಸತ್ಯ. ನನ್ನ ರಾಜ್ಯಾಧ್ಯಕ್ಷನಾಗಿ ಘೋಷಿಸಿದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ, ಜೆ.ಪಿ. ನಡ್ಡಾ, ಪಕ್ಷದ ಹೈಕಮಾಂಡ್‌ ಎಂದು ಬಿ.ವೈ ವಿಜಯೇಂದ್ರ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ:
ಈ ವೇಳೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರಕ್ಕೆ ಹಿಂದೂ ವಿರೋಧಿ ಮನಸ್ಥಿತಿ ಬಂದಿದೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದಿದೆ. ಪೆಟ್ರೋಲ್​ ಬಾಂಬ್​ ಹಾಕಿ ಅಂಗಡಿಗಳ ಸುಟ್ಟು ಹಾಕಿದ್ದಾರೆ. ಪಾಂಡವಪುರದಲ್ಲಿನ ಆರ್​ಎಸ್​ಎಸ್​ ಕಚೇರಿ ಮೇಲೆ ಪೊಲೀಸರ ದಾಳಿ ನಡೆದಿದೆ. ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ಹೀಗೆ ಮಾಡುತ್ತಿದ್ದಾರೆ. ಇದು ರಣಹೇಡಿ ಸರ್ಕಾರ ಎಂದು ಬಿ.ವೈ. ವಿಜಯೇಂದ್ರ ಹರಿಹಾಯ್ದರು.

Advertisement

Udayavani is now on Telegram. Click here to join our channel and stay updated with the latest news.

Next