Advertisement

ಹೇಳಿಕೆ ಕುರಿತು ಸಿಎಂ ಜತೆ ಚರ್ಚೆ: ಪರಮೇಶ್ವರ್‌

07:15 AM Jun 14, 2018 | Team Udayavani |

ಬೆಂಗಳೂರು: ವಿಧಾನಸೌಧದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂಬ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ
ಹೇಳಿಕೆಯನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಆ ರೀತಿಯ ಭ್ರಷ್ಟಾಚಾರ ಏನೂ
ಇಲ್ಲ ಎಂದು ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮುಖ್ಯಮಂತ್ರಿಗಳು ಆ ರೀತಿ ಏಕೆ ಹೇಳಿದರು ಎಂಬುದು ಗೊತ್ತಿಲ್ಲ. ಈ ಕುರಿತು ಅವರೊಂದಿಗೆ ಮಾತನಾಡುತ್ತೇನೆ. ಮೇಲಾಗಿ, ಭ್ರಷ್ಟಾಚಾರ ಕಂಡು ಬಂದಲ್ಲಿ ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಅದನ್ನು ನಿಯಂತ್ರಿಸುವುದಕ್ಕಾಗಿಯೇ ಎಸಿಬಿ, ಲೋಕಾಯುಕ್ತದಂತಹ ಸಂಸ್ಥೆಗಳಿವೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next