Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸಿದ ನಾಗೇಂದ್ರ, “ಕಾಂಗ್ರೆಸ್ ಬಿಡುವುದಿಲ್ಲ, ರಮೇಶ್ ಜಾರಕಿಹೊಳಿ’ ಜತೆ ಹೋಗುವುದಿಲ್ಲ ಎಂದು ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
Related Articles
Advertisement
ರಮೇಶ್ ಜಾರಕಿಹೊಳಿ ಬಂಡಾಯ ಹಿನ್ನೆಲೆಯಲ್ಲಿ ಸರ್ಕಾರ ಉಳಿಸಿಕೊಳ್ಳಲು “ರಂಗಪ್ರವೇಶ’ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ರಮೇಶ್ ಜಾರಕಿಹೊಳಿ ಜತೆ ಗುರುತಿಸಿಕೊಂಡವರನ್ನು ಪ್ರತ್ಯೇಕವಾಗಿ ಕರೆದು ಮಾತನಾಡುತ್ತಿದ್ದಾರೆ.
ಇತ್ತೀಚೆಗೆ ಮಹೇಶ್ ಕುಮಟಳ್ಳಿ ಅವರನ್ನು ಜೆಪಿ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾತನಾಡಿಸಿದ್ದರು. ನಂತರ, ಡಿ.ಕೆ.ಶಿವಕುಮಾರ್ ಮೂಲಕ ಮತ್ತೂಬ್ಬ ಶಾಸಕ ಶ್ರೀಮಂತ್ ಪಾಟೀಲ್ ಜತೆಯೂ ಚರ್ಚಿಸಿದ್ದರು. ಇದೀಗ ನಾಗೇಂದ್ರ ಜತೆ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಒಟ್ಟಾರೆ, ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಅವರ ಆಪ್ತರನ್ನು ಹಿಡಿದಿಟ್ಟುಕೊಂಡು ಸರ್ಕಾರ ಉಳಿಸಿಕೊಳ್ಳುವುದು ಈ ಎಲ್ಲಾ ಪ್ರಯತ್ನಗಳ ಉದ್ದೇಶ. ಜೊತೆಗೆ, ರಮೇಶ್ ಜಾರಕಿಹೊಳಿ ಜತೆ ವೈಯಕ್ತಿಕವಾಗಿ ಉತ್ತಮ ಬಾಂಧವ್ಯ ಹೊಂದಿರುವ ಕುಮಾರಸ್ವಾಮಿ, ದೂರವಾಣಿ ಮೂಲಕ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.