ವಿಟ್ಲ: ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊದು ಅನ್ಯ ಮತದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಮಹಮ್ಮದ್ ಶಾಕೀರ್ ನೀಡಿದ ದೂರಿನಂತೆ ಕೆಲಿಂಜ ನಿವಾಸಿಗಳಾದ ಚಂದ್ರಶೇಖರ, ಪ್ರಜ್ವಲ್, ರೋಹಿತ್ ಹಾಗೂ ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಂಗಳೂರು ಬಲ್ಮಠದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಶಾಕೀರ್ ವಿದ್ಯಾಭ್ಯಾಸ ಮಾಡುತ್ತಿದ್ದು ಕಾಲೇಜು ಮುಗಿಸಿ ಕೆ.ಎಸ್.ಆರ್.ಟಿ.ಸಿ. ಬಸ್‌ನಲ್ಲಿ ಗುರುವಾರ ರಾತ್ರಿ ಮನೆಗೆ ಬರುತ್ತಿದ್ದಾಗ ಈತನ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೇ ಎಂದು ಕೇಳಿದ್ದ ಎನ್ನಲಾಗಿದೆ. ಬಸ್ ವೀರಕಂಬ ಗ್ರಾಮದ ಕೆಲಿಂಜಕ್ಕೆ ತಲುಪಿದಾಗ ಏಕಾಏಕಿಯಾಗಿ ನುಗ್ಗಿದ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಶಾಕೀರ್ ಪೊಲೀಸರಿಗೆ ದೂರು ನೀಡಿದ್ದಾರೆ.