Advertisement

ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ’

06:40 AM May 05, 2018 | |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌
ಮೂಲಕವೇ ಟಾಂಗ್‌ ನೀಡಿದ್ದಾರೆ.

Advertisement

ಬಿಜೆಪಿ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ 1 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿಕೊಂಡಿರುವುದನ್ನು “ಸುಳ್ಳು ಭರವಸೆ, ಪೊಳ್ಳು ಪ್ರಣಾಳಿಕೆ’ ಎಂಬ ಹ್ಯಾಶ್‌ ಟ್ಯಾಗ್‌ ಮೂಲಕ
ಬಿಜೆಪಿ ಕಾಲೆಳೆದಿದ್ದಾರೆ.

ಒಂದು ಲಕ್ಷ ರೂಪಾಯಿ ಬೆಳೆ ಸಾಲ ಮನ್ನಾದ ಹೊಸ ಭರವಸೆ ಬೇಡ ಸ್ವಾಮಿ, 15 ಲಕ್ಷ ರೂ.ಬ್ಯಾಂಕ್‌ ಖಾತೆಗೆ ಹಾಕುವ ಹಳೇ ಭರವಸೆ ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒಪ್ಪಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.

ಅಲ್ಲದೇ, ನಾವು ರೈತರ ಸಾಲ ಮನ್ನಾ ಮಾಡಿದಾಗ ಕೇಂದ್ರ ಸಚಿವರೊಬ್ಬರು ಅದನ್ನು ಲಾಲಿಪಾಪ್‌ ಎಂದು ಗೇಲಿ ಮಾಡಿದ್ದರು.
ರೈತರ ಸಾಲ ಮನ್ನಾಕ್ಕೆ ಕೇಂದ್ರದಿಂದ ಒಂದು ಪೈಸೆಯನ್ನೂ ಕೊಡುವುದಿಲ್ಲ ಎಂದು ಕೇಂದ್ರ ಸಚಿವ ಅರುಣ್‌ ಜೇಟ್ಲಿ ಹೇಳಿದ್ದರು.

ನಿಮ್ಮನ್ನು ನಮ್ಮ ರೈತರು ನಂಬುತ್ತಾರಾ ಎಂದು ಪ್ರಶ್ನಿಸಿದ್ದಾರೆ ರೈತರ ಸಾಲ ಮನ್ನಾ ಮಾಡಿ ಎಂದು ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ ಅವರನ್ನು ಕೇಳಿದರೆ, ನನ್ನಲ್ಲಿ ನೋಟ್‌ ಪ್ರಿಂಟ್‌ ಮಾಡುವ ಮಷಿನ್‌ ಇದೆ ಏನ್ರಿ ಎಂದು ಸಿಡಿಮಿಡಿಯಾಗಿದ್ದರು.
ಈಗೇನಾದ್ರೂ ನೋಟ್‌ ಪ್ರಿಂಟಿಂಗ್‌ ಮಷಿನ್‌ ಬಂತಾ ಯಡಿಯೂರಪ್ಪನವರೇ ಎಂದು ಕಾಲೆಳೆದಿದ್ದಾರೆ.

Advertisement

ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿನ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಿಲ್ಲ.ಅದೇ ಗತಿ ಈಗ ಬಿಡುಗಡೆ ಮಾಡಿರುವ ಪ್ರಣಾಳಿಕೆಗೂ ಆಗಲಿದೆ. ಜನರ ಕಣ್ಣಿಗೆ ಮಣ್ಣೆರಚುವ ಆಟ ನಮ್ಮ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next