ಹೊಸದಿಲ್ಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಹೇಳಿದ್ದಾರೆ.
ಸದ್ಯ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಉಕ್ರೇನಿಯನ್-ಭಾರತೀಯ ಪಾಲುದಾರಿಕೆಯನ್ನು ಬಲಪಡಿಸುವ ಪ್ರಾಮುಖ್ಯತೆಯ ಬಗ್ಗೆ ಝೆಲೆನ್ಸ್ಕಿ ಒತ್ತಿ ಹೇಳಿದರು.
ಮಾತುಕತೆಯ ಸಮಯದಲ್ಲಿ, ಉಕ್ರೇನಿಯನ್ ಪ್ರದೇಶಗಳನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಪ್ರಯತ್ನಿಸುವ ಗುರಿಯನ್ನು ಹೊಂದಿರುವ ಆಕ್ರಮಣಕಾರರ ಎಲ್ಲಾ ನಿರ್ಧಾರಗಳು “ಶೂನ್ಯ ಮತ್ತು ನಿರರ್ಥಕ ” ಎಂದು ಝೆಲೆನ್ಸ್ಕಿ ಹೇಳಿದರು.
ಮಾತುಕತೆಯ ಮೂಲಕ ಶಾಂತಿಯುತ ಇತ್ಯರ್ಥಕ್ಕೆ ಉಕ್ರೇನ್ ಯಾವಾಗಲೂ ಬದ್ಧವಾಗಿದೆ ಎಂದು ಅವರು ಮೋದಿಗೆ ತಿಳಿಸಿದರು.
” ಝಪೊರಿಝಿಯಾ ಎನ್‌ಪಿಪಿಗೆ ಸಂಬಂಧಿಸಿದಂತೆ ರಷ್ಯಾದ ಪರಮಾಣು ಬ್ಲ್ಯಾಕ್‌ಮೇಲ್ ಕೇವಲ ಉಕ್ರೇನ್ ಗೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆದರಿಕೆಯಾಗಿದೆ” ಎಂದು ಅವರು ಹೇಳಿದರು.
ವೊಲೊಡಿಮಿರ್ ಝೆಲೆನ್ಸ್ಕಿ ಅವರು ಉಕ್ರೇನ್‌ಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರಿಗೆ ಮತ್ತೆ ಆಹ್ವಾನ ನೀಡಿದರು.