Advertisement

ತಲ್ಲೂರು: ಹೃದಯಾಘಾತದಿಂದ 13 ವರ್ಷದ ಬಾಲಕಿ ಸಾವು; ನೇತ್ರದಾನ

03:11 PM Oct 28, 2022 | Team Udayavani |

ಕುಂದಾಪುರ: ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್‌ ಕುಮಾರ್‌ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲಾ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ (13) ಮನೆಯಲ್ಲಿದ್ದಾಗ ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಗುರುವಾರ ತಲ್ಲೂರಿನಲ್ಲಿ ಸಂಭವಿಸಿದೆ.

Advertisement

ಮನೆಯಲ್ಲಿದ್ದಾಗ ಯಾರೋ ಕರೆದರೆಂದು ಹೋದಾಗ ಆಕಸ್ಮಿಕವಾಗಿ ಕುಸಿದು ಬಿದ್ದ ಅನುಶ್ರೀ ಪ್ರಜ್ಞೆ ತಪ್ಪಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ಅನು ಶ್ರೀ ಮರಣೋತ್ತರ ಪರೀಕ್ಷೆ ಮಾಡಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಬಹುದು. ಹಟ್ಟಿಯಂಗಡಿ ಸಿದ್ದಿವಿನಾಯಕ ವಸತಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಅನುಶ್ರೀ ಕಲಿಕೆಯಲ್ಲಿ, ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿದ್ದು, ಕ್ರಿಯಾಶೀಲರಾಗಿದ್ದಳು.

ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಯಿತು. ಅನುಶ್ರೀ ತಾಯಿ ಮನೆಯಲ್ಲಿ ಗುರುವಾರ ರಾತ್ರಿ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಯಿತು. ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next