Advertisement

ಕುರುಗೋಡು: ತಾಲೂಕು ಆರೋಗ್ಯಾಧಿಕಾರಿ ಬೇಜವಾಬ್ದಾರಿತನ; ಎರಡನೇ ದಿನಕ್ಕೆ ಕಾಲಿಟ್ಟ ಧರಣಿ

01:55 PM Dec 09, 2022 | Team Udayavani |

ಕುರುಗೋಡು: ಸಮೀಪದ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಿರಿಗೇರಿ ಮತ್ತು ಸುತ್ತಮುತ್ತಲಿನ ಸುಮಾರು ಮೂವತ್ತು ಹಳ್ಳಿಗಳು ಅವಲಂಬಿಸಿದ್ದು, ಪ್ರತಿದಿನ ಸುಮಾರು 200ಕ್ಕೂ ಹೆಚ್ಚು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಾ.ಆ. ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದ್ದು, ಇದರಿಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೇ ಸಾವಿಗೀಡಾಗುತ್ತಿದ್ದಾರೆ.

Advertisement

ಈ ಕಾರಣಕ್ಕಾಗಿ ಅಲ್ಲಿನ ಸ್ಥಳೀಯರು ಧರಣಿ ನಡೆಸುತ್ತಿದ್ದು, ಈ ಸ್ಥಳಕ್ಕೆ ಮೊದಲ ದಿನವೇ ತಾಲೂಕು ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ಎರಡು ಮೂರು ದಿನಗಳ ಹಿಂದೆ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳಿಗೆ ಪ್ರಥಮ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ. ಆ ಸಮಯದಲ್ಲಿ ಇದ್ದ ನರ್ಸ್ ಗಳನ್ನು ಅಮಾನತುಗೊಳಿಸಬೇಕು ಹಾಗೆಯೇ ರಾತ್ರಿ ಸಮಯದಲ್ಲಿ ಖಾಯಂ ವೈದ್ಯರನ್ನು ನೇಮಿಸಬೇಕೆಂದು ಪ್ರತಿಭಟನಗಾರಾರು ಅಧಿಕಾರಿಗಳಿಗೆ ಒತ್ತಾಯ ಮಾಡಿದಾಗ ಅಧಿಕಾರಿಗಳು ಇದಕ್ಕೆ ಒಪ್ಪದ ಕಾರಣ ಜಿಲ್ಲಾ ಆರೋಗ್ಯ ಅಧಿಕಾರಿಗಳು ಬರುವ ತನಕ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಮರುದಿನವೂ (ಎರಡನೇ ದಿನ) ಪ್ರತಿಭಟನೆ ಮುಂದುವರೆಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಭೂತ ಸೌಲಭ್ಯಗಳಲ್ಲಿ ಪ್ರಮುಖವಾದ ರಾತ್ರಿ ಸಮಯದಲ್ಲಿ ಖಾಯಂ ವೈದ್ಯರನ್ನು ನೇಮಿಸಬೇಕು. 108 ಅಂಬುಲೆನ್ಸ್ ಸೇವೆ ಮತ್ತು ಮಹಿಳಾ ವೈದ್ಯರ ಸೇವೆ ಇಲ್ಲದೆ ನಿತ್ಯ ರೋಗಿಗಳು ಪರದಾಡುತ್ತಿರುವುದು ಇತ್ಯಾದಿ.

ಈಗಾಗಲೇ ಗ್ರಾಮದಲ್ಲಿ ರಾತ್ರಿ ಸಮಯದಲ್ಲಿ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ಸಿಗದೇ ಪ್ರಾಣ ಕಳೆದುಕೊಂಡ ಉದಾಹರಣೆಗಳಿವೆ. ಅಷ್ಟಲ್ಲದೆ ರಾತ್ರಿ ವೇಳೆ ಬರುವ ರೋಗಿಗಳಿಗೆ ಪ್ರಥಮ ಚಿಕಿತ್ಸೆ ಕೂಡ ಲಭಿಸದೆ ಪ್ರಾಣ ಕಳೆದುಕೊಂಡವರು ಹಲವರಿದ್ದಾರೆ.

ಗರ್ಭಿಣಿ ಸ್ತ್ರೀಯರು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ತೆರಳುವ ಸಮಯದಲ್ಲಿ ದಾರಿ ಮಧ್ಯೆ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಿರಿಗೇರಿಯಿಂದ ಬಳ್ಳಾರಿಗೆ ತುರ್ತು ಸಮಯದಲ್ಲಿ ಪ್ರಯಾಣ ಮಾಡಲು 108 ಅಂಬುಲೆನ್ಸ್ ಸೌಲಭ್ಯ ಕೂಡ ಇಲ್ಲದಾಗಿದೆ. ಈ ಕುರಿತು ಸುಮಾರು 10 ವರ್ಷಗಳಿಂದ ದೂರು ಸಲ್ಲಿಸಿ ಮನವಿ ಮಾಡಿದರೂ ಪ್ರಯೋಜನ ಆಗುತ್ತಿಲ್ಲ. ಕಳೆದ ವಾರ ಕೆಲವರು ಪ್ರಥಮ ಚಿಕಿತ್ಸೆ ದೊರೆಯದೆ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

Advertisement

ಇಂತಹ ಗಂಭೀರವಾದ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ ಸೂಕ್ತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇಂದು ಜಿಲ್ಲಾ ಅರೋಗ್ಯಾಧಿಕಾರಿಗಳು ಬಂದು ಸಮಸ್ಯೆಗಳ ಬಗ್ಗೆ ವಿಚಾರಿಸದಿದಲ್ಲಿ ನಾಳೆ ಸಿರಿಗೇರಿ ಮಾರ್ಗಕ್ಕೆ ಬರುವ ಜಿಲ್ಲಾ ಉಸ್ತುವಾರಿ ಮಂತ್ರಿಗಳ ಕಾರು ನಿಲ್ಲಿಸಿ ಬೇಡಿಕೆ ಈಡೇರಿಕೆಗೆ ಒತ್ತಾಯ ಮಾಡಲಾಗುವುದು ಎಂದು ಪ್ರತಿಭಟನಕಾರರಿಂದ ತಿಳಿದು ಬಂದಿದೆ.

ಆದ್ದರಿಂದ ಕೂಡಲೇ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next