Advertisement

ಕಾಪು ತಾಲೂಕು ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

12:47 PM Nov 01, 2021 | Team Udayavani |

ಕಾಪು: ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 66 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಧ್ವಜಾರೋಹಣ ನೆರವೇರಿಸಿದರು.

Advertisement

ಇವರು ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡದ ಬಳಕೆ ನಿರಂತರವಾಗಬೇಕಿದ್ದು ಅದಕ್ಕೆ ಪೂರಕವಾಗಿ ಕನ್ನಡ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಅಭ್ಯಸಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಲಾಲಾಜಿ‌ ಆರ್. ಮೆಂಡನ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಪಣ ತೊಡಬೇಕಿದೆ. ಕಾಪು ತಾಲೂಕಿನ 6 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು ತಾಲೂಕು ಮಟ್ಟದಲ್ಲಿಯೂ ಸಾಧಕರನ್ನು ಗುರುತಿಸಿ, ಗೌರವಿಸಲಾಗಿದೆ ಎಂದರು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ತಾ. ಪಂ. ಕಾರ್ಯ ನಿರ್ವಾಹಣಾಧಿಕಾರಿ ವಿವೇಕಾನಂದ ಗಾಂವ್ಕರ್, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ, ವೃತ್ತ ನಿರೀಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕ ಶಂಕರ್ ಸುವರ್ಣ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಅನಿಲ್ ಕುಮಾರ್, ಕಾಪು ಎಸ್ಸೈ ರಾಘವೇಂದ್ರ ಸಿ., ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುಬ್ರಾಯ ಕಾಮತ್, ಕಾಪು ತಾಲೂಕು ಸಾಹಿತ್ಯ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಪುಂಡಲೀಕ ಮರಾಠೆ, ಮಾಜಿ ಜಿ.ಪಂ‌. ಸದಸ್ಯೆ ಶಿಲ್ಪಾ ಜಿ. ಸುವರ್ಣ ಅತಿಥಿಗಳಾಗಿದ್ದರು.

Advertisement

ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಕೆ. ರವಿಶಂಕರ್, ಅಶೋಕ್ ಕೋಟೆಕಾರ್, ಚಂದ್ರಹಾಸ ಬಂಗೇರ, ಕಂದಾಯ ನಿರೀಕ್ಷಕ ಸುದೀರ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಪೌರಕಾರ್ಮಿಕ ಮಹಿಳೆಗೆ ರಾಜ್ಯೋತ್ಸವ ಗರಿ

ಸಾಧಕರಾದ ಸುಂದರ ಅಂಚನ್‌ ಪಾಂಗಾಳ, ಶಶಾಂಕ್ ಸುವರ್ಣ, ಈಶ್ವರ ಮಲ್ಪೆ ಅವರನ್ನು ಗೌರವಿಸಲಾಯಿತು. 24 ಮಂದಿಗೆ 1.24 ಲಕ್ಷ ರೂ. ಪ್ರಾಕೃತಿಕ ವಿಕೋಪ ನಿಧಿಯ ಪರಿಹಾರ ಚೆಕ್ ಗಳನ್ನು ವಿತರಿಸಲಾಯಿತು. ಕಾಪು ಪುರಸಭೆ ವತಿಯಿಂದ ಇಬ್ಬರಿಗೆ ಶ್ರವಣ ಸಾಧನಗಳನ್ನು ವಿತರಿಸಲಾಯಿತು.

ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಸ್ವಾಗತಿಸಿದರು.  ಶಿಕ್ಷಣ ಸಂಯೋಜಕ ಶಂಕರ ಸುವರ್ಣ ವಂದಿಸಿದರು. ದಂಡತೀರ್ಥ ಪ. ಪೂ. ಕಾಲೇಜಿನ ಉಪನ್ಯಾಸಕ ನೀಲಾನಂದ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next